ನಿಶ್ಚಿತಾರ್ಥವಾಗಿ ಇನ್ನೇನು ಮದುವೆ ಆಗಬೇಕಿದ್ದಾಕೆ ಬಾವಿಗೆ ಹಾರಿ ಆತ್ಮಹತ್ಯೆ; ಈಕೆಯ ಈ ನಿರ್ಧಾರಕ್ಕೆ ಕಾರಣವಾಯಿತು ಆತನ ಸಾವು!

Share the Article

ನಿಶ್ಚಿತಾರ್ಥವಾಗಿ ಇನ್ನೇನು ಮದುವೆಗೆ ಕೆಲವೇ ದಿನಗಳಲ್ಲಿ ಮದುವೆ ಎನ್ನುವಷ್ಟರಲ್ಲೇ, ಇತ್ತ ಕಡೆಯಿಂದ ಪ್ರಿಯಕರನ ಸಾವಿನ ಸುದ್ದಿ ಕೇಳಿ ಬಂದಿದೆ. ಇದರಿಂದ ಮನನೊಂದ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದವರು.

ಈ ಘಟನೆ ಬೀದರ್​ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಇವರಿಬ್ಬರು ಕೂಡ ಆಳವಾಗಿ ಪ್ರೀತಿಸುತ್ತಿದ್ದರು. ಆದರೆ, ಮನೆಯವರು ಮದುವೆಗೆ ನಿರಾಕರಿಸಿದ್ದಾರೆ. ಇಬ್ಬರು ಸಹ ಲಾಡಗೇರಿ ಬಡಾವಣೆಯ ನಿವಾಸಿಗಳು. ಇತ್ತೀಚೆಗೆ ಸಂಗೀತಾ ನಿಶ್ಚಿತಾರ್ಥ ಬೇರೊಂದು ಹುಡುಗನ ಜತೆ ನಡೆದಿತ್ತು. ಶೀಘ್ರದಲ್ಲಿ ಮದುವೆ ಸಹ ನಡೆಯಬೇಕಿತ್ತು. ಈ ಹಿನ್ನೆಲೆ ಮನನೊಂದು ಶರತ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ. ಪ್ರಿಯಕರನ ಸಾವಿನ ಸುದ್ದಿ ಕೇಳಿ ಸಂಗೀತಾ ತನ್ನ ಮನೆಯಲ್ಲಿನ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಬ್ಬರ ಪ್ರೀತಿಗೆ ಅಡ್ಡ ಬಂದ ಎರಡು ಮನೆಯವರು ಏನೂ ಹೇಳಲಾಗದೆ ಕಂಗಾಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply