Home latest ಹುಟ್ಟುಹಬ್ಬದಂದೇ ಸಾವು ಕಂಡ ಉಪನ್ಯಾಸಕಿಯ ಸಾವಿಗೆ ಕಾರಣ ಡೆತ್ ನೋಟಲ್ಲಿ ಬಯಲು | ಇಲ್ಲಿದೆ ಫುಲ್...

ಹುಟ್ಟುಹಬ್ಬದಂದೇ ಸಾವು ಕಂಡ ಉಪನ್ಯಾಸಕಿಯ ಸಾವಿಗೆ ಕಾರಣ ಡೆತ್ ನೋಟಲ್ಲಿ ಬಯಲು | ಇಲ್ಲಿದೆ ಫುಲ್ ಡಿಟೇಲ್ಸ್

Hindu neighbor gifts plot of land

Hindu neighbour gifts land to Muslim journalist

ನಿನ್ನೆ ಹುಟ್ಟಿದಹಬ್ಬದ ದಿನದಂದೇ ಚಾಮರಾಜನಗರದ ಉಪನ್ಯಾಸಕಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆಯೊಂದು ನಡೆದಿತ್ತು. ನಗರದ ಖಾಸಗಿ ಕಾಲೇಜಿನ ಉಪನ್ಯಾಸಕಿ ಚಂದನಾ(26) ತನ್ನ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾಗಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲೇ ಮಂಗಳವಾರ ನೇಣುಬಿಗಿದುಕೊಂಡು ಚಂದನಾ ಸಾವು ಕಂಡಿದ್ದಾರೆ.

ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಮಹದೇವಸ್ವಾಮಿ ಮತ್ತು ಶೈಲಜಾ ಪುತ್ರಿ ಚಂದನಾ, ಚಾಮರಾಜನಗರದ ಖಾಸಗಿ ಕಾಲೇಜಿನಲ್ಲಿ ಎಂಎಸ್ಸಿ ವ್ಯಾಸಂಗ ಮುಗಿಸಿ, ನಂತರ ಅದೇ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಅಷ್ಟು ಮಾತ್ರವಲ್ಲದೇ ಅದೇ ಕಾಲೇಜಿನ ಹಾಸ್ಟೆಲ್‌ನಲ್ಲೇ ಉಳಿದುಕೊಂಡಿದ್ದರು. ನಿನ್ನೆ (ಮಂಗಳವಾರ) ಇವರ 26ನೇ ವರ್ಷದ ಜನ್ಮದಿನವಿತ್ತು. ಆದರೆ ಬೆಳಗ್ಗೆ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ವೇಳೆ ಪೊಲೀಸರು ಪರಿಶೀಲನೆ ನಡೆಸಿದಾಗ ಡೆಟ್‌ನೋಟ್ ಪತ್ತೆಯಾಗಿದೆ.

ಚಂದನಾ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಬರೆದಿದೆ. ‘ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ನನ್ನ ಜೊತೆ ಒಬ್ಬೊಬ್ಬರು ಒಂದೊಂದು ಥರ ನಡೆದುಕೊಳ್ಳುತ್ತಿದ್ದೀರಾ? ನಾನು ಯಾರ ಪರ ಇರಲಿ, ಯಾರ ಮಾತು ಕೇಳಿಲಿ? ಎಂದು ಗೊತ್ತಾಗುತ್ತಿಲ್ಲ. ನಾನು ಏನು ಅಂದುಕೊಂಡರೂ ಮಾಡಲು ಆಗುತ್ತಿಲ್ಲ ಮಾಡೋಕ್ಕೆ ಬಿಡುತ್ತಿಲ್ಲ. ಎಲ್ಲರೂ ಹೇಳಿದ್ದನ್ನು ಕೇಳಿ ಸಾಕಾಗಿದೆ. ಮುಂದೆ ಏನು ಮಾಡಬೇಕು? ಹೇಗೆ ಇರಬೇಕು? ಎಲ್ಲ ಪ್ರಶ್ನೆಯಾಗಿಯೇ ಉಳಿದಿದೆ. ನನ್ನ ಮೈಂಡ್ ಫುಲ್ ಬ್ಲ್ಯಾಂಕ್ ಆಗಿದೆ. ಏನು ಮಾಡೋಕು ಆಗುತ್ತಿಲ್ಲ’.

‘ಈ ಕಡೆ ಕಾಲೇಜು, ಆ ಕಡೆ ಮನೆ. ಎರಡೂ ಕಡೆ ಒಟ್ಟಿಗೆ ಹೇಗೆ ಇರೋದಿಕ್ಕೆ ಆಗುತ್ತೆ? ಕೆಲಸ ಹೊಸದು. ಮಕ್ಕಳಿಗೆ ಅರ್ಥ ಆಗೋ ಹಾಗೆ ಪಾಠ ಮಾಡಬೇಕು, ಓದಬೇಕು. ನೋಟ್ಸ್ ಮಾಡಬೇಕು. ನಾನು ಓದೋದು ನಿಧಾನ. ಟೈಂ ಹೇಗೆ ಮ್ಯಾನೇಜ್ ಮಾಡಬೇಕು ಗೊತ್ತಾಗುತ್ತಿಲ್ಲ. ಅದಕ್ಕೆ ನಾನು ಮನೆಗೂ ಬರ್ತಾ ಇರಲಿಲ್ಲ. ಸಾರಿ ಪಪ್ಪಾ.. ನನಗೆ ಆಗುತ್ತಿಲ್ಲ. ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ನಿಮ್ಮದೇ ಆದ ದೃಷ್ಟಿಯಲ್ಲಿ ನೋಡ್ತೀರ. ಸಾರಿ ಫ್ರೆಂಡ್ಸ್ ಆಲ್… ನಾನು ಯಾರನ್ನೂ ಪ್ರೀತಿ ಮಾಡ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣ’.

‘ಮೇಘ ಅಕ್ಕ ಯಾರಿಗೂ ಹಿಂಸೆ ಕೊಡಬೇಡ. ಅನು ಅಕ್ಕ ಸಾರಿ ಕಣೆ, ನೀನು ನನಗೆ ಎಲ್ಲ ಮಾಡಿದ್ರೂ ಯೂ ಆರ್ ಮೈ ಬೆಸ್ಟ್. ನಿತ್ಯ ಚೆನ್ನಾಗಿ ಓದಿ ಒಳ್ಳೆಯ ಕೆಲಸ ತೆಗೆದುಕೊ, ಈ ಕೆಲಸ ಬೇಡ. ಆರೋಗ್ಯ ಹಾಳಾಗುತ್ತೆ. ಅಜ್ಜಿ ಅಮ್ಮ ಎಲ್ಲರೂ ಚೆನ್ನಾಗಿರಿ. ರಮ್ಯ ಮೇಡಂ ಸಾರಿ… ಮಿಸ್ ಯು ಆಲ್’ ಎಂದು ಡೆತ್‌ನೋಟ್‌ನಲ್ಲಿ ಇದೆ.