ಮಹಿಳಾ ಅಭ್ಯರ್ಥಿಗಳೇ ನಿಮಗೊಂದು ಸಿಹಿ ಸುದ್ದಿ | ರಾಜ್ಯ ಸರ್ಕಾರ’ದಿಂದ ‘ಶೇ.33ರಷ್ಟು ಹುದ್ದೆ’ ನಿಗದಿ

ರಾಜ್ಯ ಸರಕಾರ ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊರಗುತ್ತಿಗೆಯ ಹುದ್ದೆ ನಿರೀಕ್ಷೆಯಲ್ಲಿದ್ದ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ಎಂದೇ ಹೇಳಬಹುದು.

ಈ ಆದೇಶದಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ ಜಿಲ್ಲೆಗಳಲ್ಲಿ ಹೊರಗುತ್ತಿಗೆ ಮೂಲಕ ಪಡೆಯುವ ಟೆಂಡರ್ ಪ್ರಕಟಣೆಯಲ್ಲಿ ಮತ್ತು ಹೊರಗುತ್ತಿಗೆ ಏಜನ್ಸಿಗಳೊಂದಿಗೆ ಮಾಡಿಕೊಳ್ಳಲಾಗುವ ಒಪ್ಪಂದದಲ್ಲಿ ಶೇ.33ರಷ್ಟು ಹುದ್ದೆಗಳನ್ನು ಕಡ್ಡಾಯವಾಗಿ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ತಿಳಿಸಿದೆ.

ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳು ಹೊರಗುತ್ತಿಗೆ ಮೂಲಕ ಪಡೆಯಲಾಗುವ ಸೇವೆಗಳಲ್ಲಿ ಹಾಗೂ ಹುದ್ದೆಗಳಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.