KRIDL AE, SDA, FDA ಪರೀಕ್ಷೆ ಮುಂದೂಡಿಕೆ, ಹೆಚ್ಚಿನ ವಿವರ ಇಲ್ಲಿದೆ!

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿ  ವಿಷಯಕ್ಕೆ ಕುರಿತಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿರ್ಧರಸಲಾಗಿದ್ದನ್ನು ಇದೀಗ ಮುಂದೂಡಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

 

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿನ ಕಿರಿಯ ಅಭಿಯಂತರರು, ಹಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 14, 2022ರಂದು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿತ್ತು. ಒಟ್ಟು 76 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.

ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 20 08-2022, 21-08-2022, 28-08-2022 ರಂದು ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ ಸದರಿ ದಿನಾಂಕಗಳಂದು ಎಸ್ಎಎಸ್‌ ಮತ್ತು ಆರ್‌ಬಿಐ ಸಂಸ್ಥೆಯ ಪರೀಕ್ಷೆಗಳು ಇರುವುದರಿಂದ ಹಲವು ಅಭ್ಯರ್ಥಿಗಳು ಈ ಪರೀಕ್ಷೆ ವೇಳಾಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಿದ್ದರು. ಈ ಕಾರಣದಿಂದ ಇದೀಗ ಪರೀಕ್ಷೆಯನ್ನು ಮುಂದೂಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಬಿಡುಗಡೆ ಮಾಡಿದೆ.

ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Leave A Reply

Your email address will not be published.