Breaking News | ಮತ್ತಿಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತ, ಸೆಕ್ಷನ್ 144 ಜಾರಿ

Share the Article

ಅಮೃತ ಮಹೋತ್ಸವದ ದಿನದಂದೆ ಮತ್ತಿಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತವಾಗಿದೆ. ದಿನೇ ದಿನೇ ಉದ್ವಿಗ್ನಗೊಳ್ಳುತ್ತಿರುವ ಹಿಂದೂ-ಮುಸ್ಲಿಂ ವಿವಾದದ ನಡುವೆ, ಒಂದೊಂದೇ ದಾಳಿ ಹೆಚ್ಚಾಗುತ್ತಿದೆ. ಇದೀಗ ಮತ್ತೆ ಹಿಂದೂ ಕಾರ್ಯಕರ್ತನ ಮೇಲೆ ಮರಣಾಂತಿಕ ದಾಳಿ ನಡೆದಿದ್ದು, ನಗರವನ್ನೇ ಬೆಚ್ಚಿ ಬೀಳಿಸಿದೆ.

ಹೌದು. ಸಾವರ್ಕರ್‌ – ಟಿಪ್ಪು ಫೋಟೋ ವಿಷಯಕ್ಕೆ ವಿವಾದ ಹುಟ್ಟಿಕೊಂಡಿರುವ ಬೆನ್ನಲ್ಲೇ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಪ್ರೇಮ್ ಕುಮಾರ್(22) ಎಂಬಾತನಿಗೆ ಚೂರಿ ಇರಿಯಲಾಗಿದೆ. ಗಾಂಧಿ ಬಜಾರ್ ನಲ್ಲಿರುವ ನಂದಿ ಟೆಕ್ಸ್ ಟೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರೇಮ್ ಕುಮಾರ್ ಗೆ ಗಾಂಧಿ ಬಜಾರ್‌ ನ ಉಪ್ಪಾರ ಕೇರಿ ಸಮೀಪ ಅನ್ಯಕೋಮಿನ ಯುವಕರು ಚಾಕು ಇರಿದಿದ್ದಾರೆ.

ಮತ್ತೊಂದೆಡೆ ಅಂಗಡಿ ಬಾಗಿಲು ಮುಚ್ಚಿ ಮನೆಗೆ ಹೋಗುವಾಗ ಪ್ರವೀಣ್‌ ಪ್ರವೀಣ್ ಕುಮಾರ್ (27) ಎಂಬ ಯುವಕನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ಅಶೋಕ‌ನಗರ ಬಡಾವಣೆಯಲ್ಲಿ ನಡೆದಿದೆ.

ಉಪ್ಪಾರಕೇರಿಯಲ್ಲಿ 20 ವರ್ಷದ ಪ್ರೇಮ್ ಸಿಂಗ್ ಎಂಬಾತನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿಯಲಾಗಿದ್ದು, ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಬೈಕ್ ಬಿಟ್ಟು ಪರಾರಿಯಾಗಿದ್ದಾರೆ.

ಇಂದಿನಿಂದ ಮೂರು ದಿನ ಶಿವಮೊಗ್ಗ ನಗರದಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

Leave A Reply