ನಾಳೆ ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ !!!

ಶಿವಮೊಗ್ಗ ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ, ಇಬ್ಬರಿಗೆ ಚಾಕುವಿನಿಂದ ಇರಿತದ ಪರಿಣಾಮ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

 

ಹೀಗಾಗಿ ನಾಳೆ ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ 16/08/2022 ರಂದು ರಜೆ ಘೋಷಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.

ನಗರದ ಉಪ್ಪಾರಕೇರಿ ಹಾಗೂ ಅಶೋಕ ನಗರದಲ್ಲಿ ದುಷ್ಕರ್ಮಿಗಳು ಇಬ್ಬರಿಗೆ ಚಾಕುವಿನಿಂದ ಇರಿದಿದ್ದರು. ಹೀಗಾಗಿ ನಗರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು. ಈ ಕಾರಣದಿಂದಾಗಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು, ನಾಳೆ ಮತ್ತು ನಾಡಿದ್ದು ಮೂರು ದಿನ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Leave A Reply

Your email address will not be published.