ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು, ಪೊಲೀಸರಿಗೂ ಚಾಕು ಎತ್ತಿದವನಿಗೆ ಬಿತ್ತು ಢಂ ಢಂ!

ಶಿವಮೊಗ್ಗದಲ್ಲಿ ಬೆಳಂ ಬೆಳಗ್ಗೆ ಗಾಢ ನಿದ್ದೆಯಲ್ಲಿದ್ದ, ತುಂತುರು ಮಳೆ ಹನಿಯ ನಡುವೆ ಬೆಚ್ಚಗೆ ಮಲಗಿದ್ದ ಜನತೆಗೆ ನಿದ್ರಾ ಭಂಗ. ಢಂ ಢಂ ಗುಂಡಿನ ಸದ್ದು ಮಾರ್ದನಿಸಿದಾಗ ಜನತೆಗೆ ಎಚ್ಚರ. ಶಿವಮೊಗ್ಗದಲ್ಲಿ ನಿನ್ನೆ ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಇಬ್ಬರನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರ್ನಾಮಿಬೈಲ್‌ನ ನಿವಾಸಿ ಜಬೀವುಲ್ಲಾನನ್ನು ಪೊಲೀಸರು ತಡರಾತ್ರಿ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪ್ರೇಮ್ ಸಿಂಗ್ ಎಂಬ ಯುವಕನಿಗೆ ಗಾಂಧಿ ಬಜಾರ್‌ನಲ್ಲಿ
ಆರೋಪಿಗಳು ಚಾಕು ಇರಿದು ಪರಾರಿಯಾಗಿದ್ದರು. ಅನಂತರ ಪೊಲೀಸರು ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25) ಎಂಬವನ್ನು ಬಂಧಿಸಿ ತೀವ್ರ ವಿಚಾರಣೆ ಮಾಡಿದ್ದಾರೆ. ಅನಂತರ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಅದರಂತೆ ತೀರ್ಥಹಳ್ಳಿ ರಸ್ತೆಯ ನಮೋ ಶಂಕರ ಲೇಔಟ್‌ನಲ್ಲಿ ಆರೋಪಿ ಇರುವ ಸುಳಿವು ಪಡೆದ ಪೊಲೀಸರು ತಡರಾತ್ರಿ ಕಾರ್ಯಾಚರಣೆಗೆ ಇಳಿದು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸೋಮವಾರ ನಡೆದ ಘಟನೆಯಲ್ಲಿ ಈತ ಮೊದಲ ಆರೋಪಿಯಾಗಿದ್ದಾನೆ.

ಆರೋಪಿಗಳಾದ ಜಬೀವುಲ್ಲಾ ಮತ್ತು ನದೀಂ

ಆದರೆ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಜಬೀವುಲ್ಲಾ ಹಲ್ಲೆಗೆ ಮುಂದಾಗಿದ್ದು, ಈ ಸಂದರ್ಭದಲ್ಲಿ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ವಿನೋಬನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಕುರಿ ಅವರು ಸಬೀವುಲ್ಲಾನ ಕಾಲಿಗೆ ಗುಂಡು ಹಾರಿಸಿದ್ದಾರೆ. ಪರಿಣಾಮವಾಗಿ ಆರೋಪಿ ಸ್ಥಳದಲ್ಲೇ ಕುಸಿದುಬಿದ್ದಿದ್ದಾನೆ. ಕೂಡಲೇ ಈತನನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಆರೋಪಿ ಜಬೀವುಲ್ಲಾನನ್ನು ಮೆಗ್ಗಾನ್ ಜೈಲ್ ವಾರ್ಡ್‌ಗೆ ಶಿಫ್ಟ್ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದ ಪೊಲೀಸರು, ಪ್ರಮುಖ ಆರೋಪಿ ಸೇರಿದಂತೆ ಮತ್ತಿಬ್ಬರ ಬಂಧನಕ್ಕೆ ಶೋಧ ಮುಂದುವರಿಸಿದ್ದರು. ಈ ಪೈಕಿ ಪ್ರಮುಖ ಆರೋಪಿಯ ಬಂಧನವಾಗಿದೆ. ಶೀಘ್ರದಲ್ಲೇ ಮತ್ತಿಬ್ಬರ ಬಂಧನ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದ ಪೊಲೀಸರು, ಪ್ರಮುಖ ಆರೋಪಿ ಸೇರಿದಂತೆ ಮತ್ತಿಬ್ಬರ ಬಂಧನಕ್ಕೆ ಶೋಧ ಮುಂದುವರಿಸಿದ್ದರು. ಈ ಪೈಕಿ ಪ್ರಮುಖ ಆರೋಪಿಯ ಬಂಧನವಾಗಿದೆ. ಅಲ್ಲದೆ, ಆರೋಪಿಗಳ ಹಿನ್ನೆಲೆ, ಅವರು ಯಾವ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ ಎಂಬುದು ತನಿಖೆ ನಂತರವಷ್ಟೇ ತಿಳಿದುಬರಲಿದೆ. ಅವರ ವಿರುದ್ಧ ಕೇಸು ದಾಖಲಿಸುವುದರ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕುವ ವಿಚಾರವಾಗಿ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

Leave A Reply

Your email address will not be published.