“ಮುಸ್ಲಿಂ ಏರಿಯಾದಲ್ಲಿ ಸಾರ್ವಕರ್ ಫೋಟೋ ಯಾಕೆ ಹಾಕಿದ್ದು ?” – ಸಿದ್ದರಾಮಯ್ಯ ಹೇಳಿಕೆ ವೈರಲ್

ರಾಜ್ಯಾದ್ಯಂತ ಸಾರ್ವಕರ್ ಫೋಟೋ ಭಾರೀ ಕೋಲಾಹಲ ಎಬ್ಬಿಸಿದ ವಿಷಯ ಎಲ್ಲರಿಗೂ ತಿಳಿದೇ ಇದೆ. ಇದರ ಮಧ್ಯೆ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ಭಾರೀ ವೈರಲ್ ಆಗುತ್ತಿದೆ.

 

ಶಿವಮೊಗ್ಗದ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕೋಕೆ ಹೋದರು ? ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಟ್ವಿಟ್ಟರಲ್ಲಿ ಸಾಕಷ್ಟು ಟ್ರೆಂಡ್ ಸೃಷ್ಟಿಸಿದೆ ಎಂದೇ ಹೇಳಬಹುದು. ಸಿದ್ದರಾಮಯ್ಯ ಅವರು ಹೇಳಿದ್ದ ‘ ಮುಸ್ಲಿಂ
ಏರಿಯಾ’ ಪದ ಟ್ವಿಟ್ಟರಲ್ಲಿ ಟ್ರೆಂಡ್ ಆಗಿದೆ. ಅಷ್ಟು ಮಾತ್ರವಲ್ಲದೇ ಈ ಹೇಳಿಕೆ ಬಗ್ಗೆ ಪಕ್ಷದಲ್ಲೂ ಸಿದ್ದರಾಮಯ್ಯ ವಿರೋಧಿ ಬಣ ಕೂಟ ಟೀಕಿಸಿದೆ.

ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಫೋಟೋ ಏಕೆ ವಿಚಾರ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ತಮ್ಮ ಹೇಳಿಕೆ ಸಮರ್ಥನೆ ಮಾಡಿಕೊಂಡಿದ್ದಾರೆ.

“ಏ ನಡಿಯಪ್ಪ, ಮುಸ್ಲಿಂ ಏರಿಯ ಅಲ್ವಾ? ಮುಸ್ಲಿಂ
ಇರೋ ಕಡೆ ಯಾಕೆ ಪ್ಲೆಕ್ಸ್ ಏಕೆ ಹಾಕಿದ್ದು ಬೇರೆ
ಕಡೆ ಹಾಕಬೋದಿತ್ತು” ಅಂದಿದ್ದು ಎಂದು ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಿದ್ದರಾಮಯ್ಯ
ಸಮರ್ಥನೆ ಮಾಡಿಕೊಂಡಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಆರ್. ಅಶೋಕ್ ಅವರು, ಮುಸ್ಲಿಮರು ಇರುವ ಮಾತ್ರಕ್ಕೆ ಅದನ್ನು ಪಾಕಿಸ್ತಾನ ಅಂದುಕೊಂಡಿದ್ದಾರಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ. ಸಾವರ್ಕರ್ ಫೋಟೋ ಮುಸ್ಲಿಂ ಸಮುದಾಯ ಇರುವ ಕಡೆ ಹಾಕಿದ್ದನ್ನು ಪ್ರಶ್ನಿಸಿದ್ದಾರೆ. ಮುಸ್ಲಿಂ ಏರಿಯಾ ಅಂದರೆ ಅದು ಪಾಕಿಸ್ತಾನಕ್ಕೆ ಸೇರಿದ್ಯಾ ಮುಸ್ಲಿಮರು ಇದ್ದಾರೆ ಅಂದ ಮಾತ್ರಕ್ಕೆ ಅದನ್ನು ಪಾಕಿಸ್ತಾನ ಅಂದುಕೊಂಡಿದ್ದಾರಾ ಸಿದ್ದರಾಮಯ್ಯ ಎಂದು ಖಾರವಾಗಿ ಯೇ ಪ್ರತಿಕ್ರಿಯಿಸಿದ್ದಾರೆ.

Leave A Reply

Your email address will not be published.