Home ದಕ್ಷಿಣ ಕನ್ನಡ Shocking news ಕಡಬ:ಅನಾರೋಗ್ಯ ಪೀಡಿತ ವೃದ್ಧೆಯನ್ನು ಮರದ ಬಡಿಗೆಗೆ ಕಟ್ಟಿ ಹೊತ್ತುಕೊಂಡು ಹೋದ ಮಕ್ಕಳು!!

Shocking news ಕಡಬ:ಅನಾರೋಗ್ಯ ಪೀಡಿತ ವೃದ್ಧೆಯನ್ನು ಮರದ ಬಡಿಗೆಗೆ ಕಟ್ಟಿ ಹೊತ್ತುಕೊಂಡು ಹೋದ ಮಕ್ಕಳು!!

Hindu neighbor gifts plot of land

Hindu neighbour gifts land to Muslim journalist

ಕಡಬ:ರಸ್ತೆ ಸಂಪರ್ಕವಿಲ್ಲದ ಕಾರಣ ಅನಾರೋಗ್ಯಪೀಡಿತ ವೃದ್ಧೆಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಹೋಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆಯು ಕಡಬ ತಾಲೂಕಿನ ಕಲ್ಲುಗುಡ್ಡೆ ಸಮೀಪದ ಬಳಕ್ಕ ಎಂಬಲ್ಲಿ ನಡೆದಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರೊಂದಿಗೆ ಜನಪ್ರತಿನಿಧಿಗಳ ದೌರ್ಬಲ್ಯವನ್ನು ಎತ್ತಿತೋರಿಸುತ್ತಿದೆ.

ಘಟನೆಯ ವಿವರ:ಕಡಬ ತಾಲೂಕಿನ ಕಲ್ಲುಗುಡ್ಡೆ-ನೂಜಿಬಾಳ್ತಿಲ -ಬಳಕ್ಕ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಮಳೆಯಿಂದಾಗಿ ಹದಗೆಟ್ಟು ಹೋಗಿದೆ. ಇಲ್ಲಿನ ಜನರು ತಮ್ಮ ತಮ್ಮ ವಾಹನಗಳನ್ನು ಅರ್ಧ ದಾರಿಯಲ್ಲೇ ನಿಲ್ಲಿಸಿ ನಡೆದುಕೊಂಡೇ ಮನೆ ಸೇರುತ್ತಿದ್ದಾರೆ.

ಆಗಸ್ಟ್ 19ರಂದು ಇಲ್ಲಿನ ನಿವಾಸಿ ಅನಾರೋಗ್ಯ ಪೀಡಿತ ವೃದ್ಧೆಯನ್ನು ತುರ್ತು ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆ ಬಂದಿದ್ದು, ರಸ್ತೆ ಅಭಿವೃದ್ಧಿ ಇಲ್ಲದ ಕಾರಣ ವಾಹನಗಳ ಓಡಾಟ ಕಷ್ಟಕರವಾಗಿದೆ.

ಕೂಡಲೇ ಮನೆ ಮಂದಿ ವೃದ್ಧೆಯನ್ನು ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಸುಮಾರು ಎರಡು ಕಿ.ಮೀ ವರೆಗೆ ಹೊತ್ತುಕೊಂಡೇ ಸಾಗಿದ್ದು ಬಳಿಕ ವಾಹನದ ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಸ್ತೆಯ ಅವ್ಯವಸ್ಥೆಯನ್ನು ಕಂಡೂ ಕಾಣದಂತಿರುವ ಜನಪ್ರತಿನಿಧಿಗಳಿಗೆ ಧಿಕ್ಕಾರ ಕೇಳಿಬಂದಿದೆ.