ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು: ಮೊಟ್ಟೆ ಹೊಡೆದಿದ್ದ ಕಾಂಗ್ರೆಸ್ ಆರೋಪಿ ಹೇಳಿಕೆ !

ಕೊಡಗಿನಲ್ಲಿ ಮಳೆಹಾನಿ ವೀಕ್ಷಣೆಗೆಂದು ಬಂದಿದ್ದ, ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆತ ಪ್ರಕರಣ
ದಿನಕ್ಕೊಂದು ಹೊಸತು ಆಯಾಮ ಪಡೆದುಕೊಳ್ಳುತ್ತಿದೆ. ಈಗ ಮೊಟ್ಟೆ ಎಸೆತ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನೇ ಮೊಟ್ಟೆ ಎಸೆದಿರುವುದಾಗಿ ತಿಳಿದು ಬಂದಿದೆ. ಆತನೇ ಹೇಳಿರುವ ಪ್ರಕಾರ, ನಾನು ಕಾಂಗ್ರೆಸ್ ಕಾರ್ಯಕರ್ತನೇ, ಕಾಂಗ್ರೆಸ್‌ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದಿದ್ದ ಆರೋಪಿ ಸಂಪತ್ ಹೇಳಿದ್ದಾನೆ. ಆರೋಪಿ ಸಂಪತ್‌ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಸ್ಸಿ ನ್ಯಾಯಾಲಯ ಆವರಣದಲ್ಲಿ ಬಂಧಿಸಿದ್ದಾರೆ. ಬಂಧನಕ್ಕೂ ಮೊದಲು ಸಂಪತ್ ಹೇಳಿಕೆ ನೀಡಿದ್ದಾನೆ.

 

ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್
ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು, ಆಗಸ್ಟ್ 18 ರಂದು ಹಾನಿಗೊಳಗಾದ ಪ್ರದೇಶಗಳಿಗೆ ತರಳುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು.

ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ನಂತರ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ. ಸದ್ಯ ಮೊಟ್ಟೆ ಹೊಡೆದ ಆರೋಪಿ ಸಂಪತ್ ಬಂಧನಕ್ಕೂ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಹೇಳಿದ್ದಾನೆ.

Leave A Reply

Your email address will not be published.