ಸಾವರ್ಕರ್ ರಥಯಾತ್ರೆಗೆ ಬಿಎಸ್‌ವೈ ಚಾಲನೆ- ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಮೆಗಾ ಪ್ಲ್ಯಾನ್….!!

ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಕಾರಣಕ್ಕಾಗಿ ಮೊಟ್ಟೆ ಎಸೆತ ಎದುರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಡಿಕೇರಿ ಚಲೋ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ದ ರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಸಾವರ್ಕರ್ ಯಾತ್ರೆ ಆಯೋಜಿಸಿದೆ.
ವೀರ ಸಾವರ್ಕರ್ ಪ್ರತಿಷ್ಢಾನ ಮೈಸೂರು ವತಿಯಿಂದ ಆಯೋಜಿಸಿರುವ ಎಂಟು ದಿನಗಳ ಈ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಳಗ್ಗೆ ಉದ್ಘಾಟಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

 

ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯಗೆ ಸವಾಲು ಹಾಕುವುದಕ್ಕೆ ಬಿಜೆಪಿ ನಿರ್ಧರಿಸಿದೆ. ಇದರ ಜತೆಗೆ ರಾಜ್ಯಾದ್ಯಂತ ಸಾವರ್ಕರ್ ಯಾತ್ರೆ ನಡೆಸುವುದಕ್ಕೂ ಚಿಂತನೆ ನಡೆದಿದೆ ಎಂದು ತಿಳಿದಿದೆ.

ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಳಿಕ ಸಂಘಟನಾತ್ಮಕವಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದು, ಸಾವರ್ಕರ್ ಯಾತ್ರೆ ಆ ಪೈಕಿ ಪ್ರಮುಖವಾಗಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಮಡಿಕೇರಿ ಚಲೋ ಪಾದಯಾತ್ರೆ ನಡೆಸುತ್ತಿರುವುದರಿಂದ ಹಳೆ ಮೈಸೂರು ಭಾಗದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆ ಸಿಕ್ಕಂತಾಗಿದೆ

Leave A Reply

Your email address will not be published.