Home latest ಕಾಣೆಯಾಗಿದ್ದ ಬಿಜೆಪಿ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಕಾಣೆಯಾಗಿದ್ದ ಬಿಜೆಪಿ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

Hindu neighbor gifts plot of land

Hindu neighbour gifts land to Muslim journalist

ನಾಪತ್ತೆ ಆಗಿದ್ದ ಬಿಜೆಪಿ ಮುಖಂಡ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಹೀರಾ ನಗರ ಪಟ್ಟಣದಲ್ಲಿರುವ ಮರವೊಂದಕ್ಕೆ ಬಿಜೆಪಿ ಮುಖಂಡ ಸೋಮ್ ರಾಜ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿದ ಗ್ರಾಮಸ್ಥರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನಾಧರಿಸಿ ಪೊಲೀಸರು ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಸೋಮ್ ರಾಜ್ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಆದರೆ ಕುಟುಂಬವು ದೂರು ದಾಖಲಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಹದ ಮೇಲೆ ರಕ್ತದ ಕಲೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಘಟನೆಯ ತನಿಖೆಗೆ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಮೃತದೇಹವನ್ನು ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಫಲಿತಾಂಶ ಇನ್ನೂ ಹೊರಬರಬೇಕಾಗಿದೆ. ಅದೇನೇ ಆದರೂ ಇದು ಕೊಲೆಯೋ ಆತ್ಮ ಹತ್ಯಾಯೋ ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.

ಬಿಜೆಪಿ ನಾಯಕ ಸೋಮ್ ರಾಜ್ ಅವರ ನಿಧನಕ್ಕೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸೋಮ್‍ರಾಜ್ ಕುಟುಂಬಸ್ಥರು ಸೋಮ್‍ರಾಜ್‍ನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ಸರ್ಕಾರ ತಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ದೇಶದೆಲ್ಲೆಡೆ ಬಿ ಜೆ ಪಿ ಮುಖಂಡರ ಕೊಲೆ ಆತ್ಮಹತ್ಯೆ ಸುದ್ದಿಗಳು ಕೇಳಿಬರುತ್ತಲೇ ಇದ್ದು ಅನುಮಾನಗಳು ಹುತ್ತವಾಗಿ ಬೆಳೆದಿದೆ.