4 ಚಕ್ರದ ವೈಯಕ್ತಿಕ ವಾಹನ ಹೊಂದಿರುವವರ BPL ಕಾರ್ಡ್ ಕ್ಯಾನ್ಸಲ್ ಮಾಡುವಂತಿಲ್ಲ

ಬೆಂಗಳೂರು: 4 ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ತಡೆ ನೀಡಿದೆ.

 

4 ಚಕ್ರದ ವೈಯಕ್ತಿಕ ವಾಹನ ಹೊಂದಿದವರ ಆದ್ಯತಾ ರೇಷನ್ ಕಾರ್ಡ್ ಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತಿಸುವ ಆದೇಶವನ್ನು ಸರ್ಕಾರ ತಡೆ ಹಿಡಿದಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಆಹಾರ ಇಲಾಖೆಯ ಜಂಟಿ ನಿರ್ದೇಶಕರಿಗೆ ಸರ್ಕಾರದಿಂದ ಈ ಕುರಿತಾಗಿ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Leave A Reply

Your email address will not be published.