ಪೊಲೀಸರಿಂದ ಎಸ್ಕೇಪ್ ಆಗಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಆರೋಪಿ!

ಆರೋಪಿಯೋರ್ವ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ವಿಚಿತ್ರ ಘಟನೆ ನಡೆದಿದೆ.

 

ಕಲಬುರಗಿಯ ಹಮಾಲವಾಡಿ ಬಡಾವಣೆಯ ನಿವಾಸಿ ಮುನ್ನಾ ಅಲಿಯಾಸ್ ಶೇಖ್ ಸೋಹೆಲ್ ಮೃತ ಆರೋಪಿ.

ಈತ ಪೊಲೀಸರಿಂದ ತಪ್ಪಿಸಿಕೊಳ್ಳೋ ಭರದಲ್ಲಿ ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ. ಇಂತಹದೊಂದು ಘಟನೆ ಕಲಬುರಗಿಯಲ್ಲಿ ನಡೆದಿದ್ದು, ದರೋಡೆ ಪ್ರಕರಣದಲ್ಲಿ ಈತನನ್ನು ಬ್ರಹ್ಮಪೂರ ಪೊಲೀಸರು ಬಂಧಿಸಿದ್ದರು. ಈತನನ್ನು ಕೋರ್ಟ್​ ಮುಂದೆ ಹಾಜರುಪಡಿಸಬೇಕಿತ್ತು. ಆದರೆ, ಕೋರ್ಟ್​ಗೆ ಹಾಜರಿಪಡಿಸುವ ಪೂರ್ವದಲ್ಲಿ ಕೋವಿಡ್ ತಪಾಸಣೆ ಅಗತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಈತನನ್ನು ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.

ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಸ್ಪತ್ರೆಯ ಮೂರನೇ ಮಹಡಿ ಹತ್ತಿ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.