ಮಂಗಳೂರು : ಏಕಮುಖ ರಸ್ತೆ, ಸಾರ್ವಜನಿಕರೇ ಸೆ.9ರೊಳಗೆ ಅಭಿಪ್ರಾಯ ತಿಳಿಸಿ

Share the Article

ಮಂಗಳೂರು: ಮಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗಿರುವ ಏಕಮುಖ ರಸ್ತೆ ಮತ್ತು ಜಂಕ್ಷನ್‌ಗಳ ಬಗ್ಗೆ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹಿಸಲು ಇದೀಗ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ.

ಪಾಲಿಕೆ ವ್ಯಾಪ್ತಿಯ ಕ್ಲಾಕ್ ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತ, ಎ.ಬಿ ಶೆಟ್ಟಿ ವೃತ್ತದಿ೦ದ ಹ್ಯಾಮಿಲ್ಟನ್ ವೃತ್ತ, ಹ್ಯಾಮಿಲ್ಟನ್ ವೃತ್ತದಿಂದ ರಾವ್ ಆಂಡ್ ರಾವ್ ವೃತ್ತ ಹಾಗೂ ರಾವ್ ಆಂಡ್ ರಾವ್ ವೃತ್ತದಿಂದ ಕ್ಲಾಕ್‌ಟವರ್‌ವರೆಗೆ ಏಕಮುಖ ರಸ್ತೆಯನ್ನಾಗಿ ಮಾರ್ಪಾಡಿಸಲಾಗಿದೆ.

ಆದ್ದರಿಂದ ಸಾರ್ವಜನಿಕರು, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಜಾಲತಾಣ, ಫೇಸ್‌ಬುಕ್, ಟ್ವಿಟರ್, ಇನ್ಸಾಗ್ರಾಮ್‌ನಲ್ಲಿ ಲಭ್ಯವಿರುವ ಗೂಗಲ್ ಫಾರ್ಮ್ ಲಿಂಕ್ ಮುಖಾಂತರ ಪ್ರಸ್ತಾವನೆ ಕುರಿತು ಅಭಿಪ್ರಾಯ ಸಲ್ಲಿಸಬೇಕು.

ಸಾರ್ವಜನಿಕರು ತಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಸೆ.9ರೊಳಗೆ ಸಲ್ಲಿಕೆ ಮಾಡಬಹುದು ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply