Home Karnataka State Politics Updates ರಾಜ್ಯದ SC, ST ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ಪ್ರತಿ ತಾಲ್ಲೂಕಿನಲ್ಲಿ ಉದ್ಯೋಗ – ಸಿಎಂ...

ರಾಜ್ಯದ SC, ST ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ಪ್ರತಿ ತಾಲ್ಲೂಕಿನಲ್ಲಿ ಉದ್ಯೋಗ – ಸಿಎಂ ಬೊಮ್ಮಾಯಿ ಘೋಷಣೆ

Hindu neighbor gifts plot of land

Hindu neighbour gifts land to Muslim journalist

ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ರಾಜ್ಯ ಮಟ್ಟದ ಭೋವಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, 21ನೇ ಶತಮಾನ ಜ್ಞಾನದ ಶತಮಾನ. ನಿಮ್ಮ ಜ್ಞಾನವೇ ತಂತ್ರಾಂಶ ಜ್ಞಾನವಿದೆ. ಶಿಕ್ಷಣಕ್ಕೆ ಮಹತ್ವ ನೀಡಬೇಕು. ಸಮಾಜದ ಶೈಕ್ಷಣಿಕ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಎಸ್ ಸಿ ಎಸ್ ಟಿ ಜನಾಂಗಕ್ಕೆ 1000 ವಿದ್ಯಾರ್ಥಿಗಳಿಗೆ 100 ಹಾಸ್ಟೆಲ್ ಗಳನ್ನು ಬೆಂಗಳೂರು ,ಮೈಸೂರು ಹು-ಧಾರವಾಡ,ಗುಲ್ಬರ್ಗಾ, ಮಂಗಳೂರಿನಲ್ಲಿ ನಿರ್ಮಿಸಲಾಗುತ್ತಿದೆ. ಎಸ್ ಸಿ ಎಸ್ ಟಿ ವಿದ್ಯಾರ್ಥಿ ವೇತನ, ಉನ್ನತ ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಎಸ್ ಸಿ ಎಸ್ ಟಿ ಜನಾಂಗಕ್ಕೆ 75 ಯೂನಿಟ್ ಉಚಿತ ವಿದ್ಯುತ್ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಭೂ ಒಡೆತನಕ್ಕೆ 15 ಲಕ್ಷ ರೂ., ಮನೆ ನಿರ್ಮಾಣಕ್ಕೆ 2 ಲಕ್ಷ ನೀಡಲಾಗುತ್ತಿದೆ. ಭೋವಿ ಅಭಿವೃದ್ಧಿ ನಿಗಮಕ್ಕೆ 175 ಕೋಟಿ ಯೋಜನೆಯನ್ನು ರೂಪಿಸಿ ಸೂಚಿಸಲಾಗಿದೆ ಎಂದರು.