BIGG NEWS : ವಾಹನ ಸವಾರರ ಗಮನಕ್ಕೆ : ಸೆ.30 ರವರೆಗೆ ಆಗುಂಬೆ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ!!

Share the Article

ಶಿವಮೊಗ್ಗ: ಭಾರೀ ಮಳೆಯಿಂದಾಗಿ ಮತ್ತೆ ಆಗುಂಬೆ ಘಾಟ್ ನಲ್ಲಿ ರಸ್ತೆ ಕುಸಿತಗೊಂಡಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ರಸ್ತೆ ಕುಸಿತಗೊಂಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಭಾರೀ ವಾಹನಗಳ ಸಂಚಾರ ನಿಷೇಧಗೊಳಿಸಲಾಗಿದೆ. ಒಂದು ವಾರದಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಕೆಲವು ಕಡೆಗಳಲ್ಲಿ ಶಾಲಾ ಮಕ್ಕಳಿಗೆ ರಜೆ ಘೋಷಣೆ ಕೂಡಾ ಮಾಡಲಾಗಿದೆ. ಹಾಗೂ ನಿರಂತರ ಸುರಿಯುವ ಭಾರೀ ಮಳೆಯಿಂದಾಗಿ ಯಲ್ಲೋ ಅಲರ್ಟ್ ಘೋಷಣೆಯನ್ನು ಹವಾಮಾನ ಇಲಾಖೆ ಈಗಾಗಲೇ ಘೋಷಣೆ ಮಾಡಿದೆ.

Leave A Reply