Railway Recruitment 2022 ; ಒಟ್ಟು ಹುದ್ದೆ-21, ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಸೆ.5

ಭಾರತೀಯ ರೈಲ್ವೇಯಲ್ಲಿ ಉದ್ಯೋಗವಕಾಶವಿದ್ದು, ಪಶ್ಚಿಮ ರೈಲ್ವೇ ಲೆವೆಲ್ 2, 3, 4 ಮತ್ತು 5 ಹುದ್ದೆಗಳಿಗೆ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯನ್ನು ಕ್ರೀಡಾ ಕೋಟಾದ ಅಡಿಯಲ್ಲಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

ಹುದ್ದೆಗಳ ವಿವರಗಳು:
ಈ ನೇಮಕಾತಿ ಅಡಿಯಲ್ಲಿ ಒಟ್ಟು 21 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಹತಾ ಮಾನದಂಡಗಳು:
ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಆಯಾ ಕ್ರೀಡೆಯಲ್ಲಿನ ಕಾರ್ಯಕ್ಷಮತೆ, ಸಾಧನೆಗಳು ಮತ್ತು ನಿಗದಿತ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ:
12ನೇ ತರಗತಿ ಅಥವಾ ಪಿಯುಸಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಮಾಸಿಕ ವೇತನ:
ಲೆವೆಲ್ 4 ಮತ್ತು 5 ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 25500 ರಿಂದ 92300 ರೂ.ವರೆಗೆ ವೇತನ ನೀಡಲಾಗುತ್ತದೆ.
ಲೆವೆಲ್ 2 ಮತ್ತು ಲೆವೆಲ್ 3 ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ 19900 ರಿಂದ 69100 ರೂ.ವರೆಗೆ ವೇತನ ನೀಡಲಾಗುತ್ತದೆ.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 1ನೇ ಜನವರಿ 2023 ರಂತೆ 18 ರಿಂದ 25 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕಾಗುತ್ತದೆ. ಇನ್ನು ಎಸ್‌ಸಿ, ಎಸ್‌ಟಿ, ಮಹಿಳಾ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದ್ದು, ಅದರಂತೆ 250 ರೂ. ಶುಲ್ಕ ಪಾವತಿಸಬೇಕು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಸೆಪ್ಟೆಂಬರ್ 5, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 4, 2022

ಅಧಿಕೃತ ವೆಬ್‌ಸೈಟ್ : rrcwr.com

Leave A Reply

Your email address will not be published.