RSS ಕೆಟ್ಟ ಸಂಘಟನೆಯಲ್ಲ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ
ಮಮತಾ ಬ್ಯಾನರ್ಜಿ ಗೂ ಬಿಜೆಪಿಗೂ ಇರುವ ನಂಟಿನ ಬಗ್ಗೆ ಅಷ್ಟಕಷ್ಟೇ ಸಂಬಂಧ. ಆದರೆ ಇದೇ ಆರ್ ಎಸ್ ಎಸ್ ( RSS) ಬಗ್ಗೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಚರ್ಚೆಯಲ್ಲಿದ್ದಾರೆ ಮಮತಾ ಬ್ಯಾನರ್ಜಿ ಅವರು. ಏಕೆಂದರೆ, ಆರೆಸ್ಸೆಸ್ ಅನ್ನು ಹೊಗಳಿರುವ ಅವರ ಇತ್ತೀಚಿನ ಒಂದು ಹೇಳಿಕೆ. ಮಾಧ್ಯಮ ವರದಿಗಳ ಪ್ರಕಾರ, “ಆರೆಸ್ಸೆಸ್ ( RSS) ಕೆಟ್ಟ ಸಂಘಟನೆ ಎಂದು ನಾನು ಭಾವಿಸುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. “ಈ ಸಂಘದಲ್ಲಿಯೂ ಬಿಜೆಪಿಯವರಂತೆ ಯೋಚಿಸದ ಕೆಲವರು ಇದ್ದಾರೆ. ಒಂದಲ್ಲ ಒಂದು ದಿನ ಅವರ ಈ ತಾಳ್ಮೆ ಮುರಿಯುವುದು ಖಂಡಿತ” ಎಂದು ಹೇಳಿದ್ದಾರೆ.

 

“ಆರ್‌ಎಸ್‌ಎಸ್‌ನಲ್ಲಿರುವ ಎಲ್ಲರೂ ಕೆಟ್ಟವರಲ್ಲ ಬಿಜೆಪಿಯನ್ನು ವಿರೋಧಿಸುವ ಕೆಲವರು ಒಳ್ಳೆಯವರೂ ಆಗಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಹೊರಬರುತ್ತಾರೆ” ಎಂದು ಹೇಳಿರುವ ಅವರ ಹೇಳಿಕೆ ವೈರಲಾಗಿದೆ. ತೃಣಮೂಲ ಕಾಂಗ್ರೆಸ್ ಕುಟುಂಬದ (ಪಕ್ಷ) ಹೆಸರು ಕೆಡಿಸುವ ಪ್ರಯತ್ನವನ್ನು ಯಾರೂ ಮಾಡಬಾರದು, ಹಾಗೇನಾದರೂ ಮಾಡಿದರೆ, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯ ಪೊಲೀಸ್ ದಿನಾಚರಣೆಯ ಮುನ್ನಾದಿನದಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಿ, ಈ ಸಂದರ್ಭದಲ್ಲಿ ಅವರು ಪ್ರಮುಖ ಘೋಷಣೆಗಳನ್ನು ಮಾಡಿ, ಆ ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ನವರು ಕೂಡ ಶೀಘ್ರದಲ್ಲೇ ಬಿಜೆಪಿಯನ್ನು ವಿರೋಧಿಸಲಿದ್ದಾರೆ ಎಂದು ಹೇಳಿದರು.

ನಾನು ಸಮಾಜ ಸೇವೆ ಮಾಡಲು ರಾಜಕೀಯಕ್ಕೆ ಬಂದೆ ಎಂದು ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಬ್ಯಾನರ್ಜಿ (Mamata banerjee) ಹೇಳಿದ್ದಾರೆ. ರಾಜಕೀಯ ಇಷ್ಟು ಕೊಳಕು ಎನ್ನುವ ಸೂಚನೆ ಮೊದಲೇ ಏನಾದರೂ ಸಿಕ್ಕಿದ್ದರೆ ಖಂಡಿತಾ ನಾನು ರಾಜಕೀಯಕ್ಕೆ ಬರ್ತಾ ಇರಲಿಲ್ಲ. ಯಾಕೆಂದರೆ ರಾಜಕೀಯದಲ್ಲಿದ್ದೇನೆ (Politics) ಎಂಬ ಒಂದೇ ಒಂದು ಕಾರಣಕ್ಕಾಗಿ ನನಗೆ ಹಾಗೂ ನನ್ನ ಕುಟುಂಬದವರ ವಿರುದ್ಧ, ಬಹಿರಂಗವಾಗಿಯೇ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಆಕ್ರೋಶವಾಗಿ ಹೇಳಿದ್ದಾರೆ.

Leave A Reply

Your email address will not be published.