Home latest ಮುರುಘಾ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ!! ಶೀಘ್ರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ!!

ಮುರುಘಾ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ!! ಶೀಘ್ರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ!!

Hindu neighbor gifts plot of land

Hindu neighbour gifts land to Muslim journalist

ಚಿತ್ರದುರ್ಗ:ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನವಾದ ಮುರುಘಾ ಶ್ರೀಗಳು ಎದೆನೋವೆಂದು ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯದ ಸ್ಥಿತಿ ಗಂಭೀರವಾದ ಕಾರಣ ಕೂಡಲೇ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲು ಮಾಡಲು ತೀರ್ಮಾನಿಸಲಾಗಿದೆ.

ಹೆಚ್ಚಿನ ರಕ್ತದೊತ್ತಡ, ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಂಧನವಾದ ಕೆಲ ಹೊತ್ತಿನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಪರಿಶೀಲಿಸಿದ ವೈದ್ಯ ಸಮೂಹ ಶ್ರೀಗಳ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸುವ ಬಗ್ಗೆ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸುತ್ತಿದ್ದರು ಅಲ್ಲದೇ ಬೆದರಿಕೆ, ಒತ್ತಡ ಹೇರಿತ್ತಿದ್ದರು ಎಂದು ವಿದ್ಯಾರ್ಥಿನಿಯೋರ್ವಳು ಆರೋಪಿಸಿದ್ದಳು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಿಗೆ ದೂರು ಸಲ್ಲಿಕೆಯಾಗಿ ಪ್ರಕರಣದ ತನಿಖೆ ಆರಂಭಗೊಂಡಿತ್ತು.ಈ ಮಧ್ಯೆ ಶ್ರೀಗಳ ಮಠದ ಸುತ್ತ ಪೊಲೀಸ್ ಸರ್ಪಗಾವಲು ಹಾಕಿದ್ದು, ಶ್ರೀಗಳ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬಂಧನಮಾಡಲಾಗಿತ್ತು.