ವಿದ್ಯಾರ್ಥಿಗಳೇ ಗಮನಿಸಿ : ನಾಳೆ ಬೆಳಗ್ಗೆ ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು
ಈ ರೀತಿ ಮಾಡಿ

ಸೆಪ್ಟೆಂಬರ್ 12ರಂದು (ನಾಳೆ )ದ್ವಿತೀಯ ಪಿಯುಸಿ ( Second PUC) ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( B C Nagesh) ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ’ ( Second Puc supplementary exam result) ವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ.

ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್ http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ?

• karresults.nic.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
• ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
• ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.
• ನಂತರ, ಸಬ್ಮಿಟ್ ಬಟನ್ ಕ್ಲಿಕ್ ಮಾಡಿದಾಗ ನಿಮ್ಮಫಲಿತಾಂಶ ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.
• ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.

ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ.

Leave A Reply

Your email address will not be published.