ಚಿತ್ರರಂಗದ ಖ್ಯಾತ ನಟಿಯ ಮೇಲೆ ಜಿಮ್ ತರಬೇತುದಾರನಿಂದ ಅತ್ಯಾಚಾರ!!

ಮುಂಬೈ: ಹಿಂದಿ ಚಿತ್ರರಂಗದ ಜನಪ್ರಿಯ ನಟಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದ್ದು,ಜಿಮ್ ತರಬೇತುದಾರನೊಬ್ಬನ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ.

 

ಪ್ರೀತಿಯ ನಾಟಕವಾಡಿದ ಜಿಮ್ ತರಬೇತುದಾರ ನಟಿಯನ್ನು ಬೆದರಿಸಿ ಕೃತ್ಯ ಎಸಗುತ್ತಿದ್ದ ಎನ್ನಲಾಗಿದ್ದು,ಮುಂಬೈ ಮಹಾನಗರದ ಕೆಫೆ ಪರೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಕಳೆದ ಒಂದು ವರ್ಷದಿಂದ ನಟಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ದೂರಲಾಗಿದ್ದು, ಶೀಘ್ರ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಭರವಸೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.