Home ದಕ್ಷಿಣ ಕನ್ನಡ ದಕ್ಷಿಣ ಕನ್ನಡ : ಜಿಲ್ಲಾ ಪಂಚಾಯತಿಯಲ್ಲಿ ಭರ್ಜರಿ ಉದ್ಯೋಗವಕಾಶ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ...

ದಕ್ಷಿಣ ಕನ್ನಡ : ಜಿಲ್ಲಾ ಪಂಚಾಯತಿಯಲ್ಲಿ ಭರ್ಜರಿ ಉದ್ಯೋಗವಕಾಶ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದವರಿಗೆ ಆದ್ಯತೆ

Hindu neighbor gifts plot of land

Hindu neighbour gifts land to Muslim journalist

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 09 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು‌. ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆ ಗಳ ವಿವರಗಳು ಈ ಕೆಳಗಿನಂತಿವೆ.

ಹುದ್ದೆ : ಕರವಸೂಲಿಗಾರ ( ಬಿಲ್ ಕಲೆಕ್ಟರ್) -01
ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ – 02
ವಾಟರ್ ಅಪರೇಟರ್ ( ಪಂಪು ಚಾಲಕ) – 33
ಅಟೆಂಡೆಂಟ್ ( ಜವಾನ) – 21
ಕ್ಲೀನರ್ ( ಸ್ವಚ್ಛತಾಗಾರ) – 56

ಒಟ್ಟು ಹುದ್ದೆಗಳು – 113

ವೇತನ : ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುವುದು.

ಅರ್ಜಿ ಸಲ್ಲಿಸುವ ದಿನಾಂಕ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ : 21-09-2022
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ : 03-11-2022

ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.500/-
ಪ್ರವರ್ಗ ( 2ಎ), 2( ಬಿ), 3 ( ಎ) , 3 ( ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ – 1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.200/-
ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/-

ಬ್ಯಾಂಕ್ ಶುಲ್ಕವನ್ನು ಪಾವತಿಸದೇ ಹಾಗೂ ದಾಖಲೆಗಳನ್ನು / ಭಾವಚಿತ್ರ/ಸಹಿಯನ್ನು ಅಪ್ಲೋಡ್ ಮಾಡದೇ ಇರುವ /ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ‌ನಂತರ ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸಲಾಗುವುದಿಲ್ಲ. ಅಥವಾ ಇತರೆ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಶುಲ್ಕವನ್ನು ಸಂದಾಯ ಮಾಡದಿದ್ದಲ್ಲಿ‌ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ವಿದ್ಯಾರ್ಹತೆ: ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಗೆ ನೀಡಲಾಗಿರುವ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಈ ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೇ, ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.

ಕರವಸೂಲಿಗಾರ : ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ : ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ವಾಟರ್ ಅಪರೇಟರ್ : ಕನ್ನಡವನ್ನು ಒಂದು ಭಾಷೆಯನ್ನಾಗಿ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.

ಅಟೆಂಡೆಂಟ್ ( ಜವಾನ) : ಕನ್ನಡವನ್ನು ಒಂದು ಭಾಷೆಯನ್ನಾಗಿ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕ್ಲೀನರ್ಸ್ ( ಸ್ವಚ್ಛತಾಗಾರ) : ಕನ್ನಡವನ್ನು ಒಂದು ಭಾಷೆಯನ್ನಾಗಿ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು. ಹಾಗೂ ಗರಿಷ್ಠ ಮಿತಿಯನ್ನು ಮೀರಿರಬಾರದು.

ಕನಿಷ್ಠ ವಯೋಮಿತಿ – 18 ವರ್ಷ

ಸಾಮಾನ್ಯ ಅರ್ಹತೆ
ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು.
ಪ್ರವರ್ಗ ( 2ಎ), 2( ಬಿ), 3 ( ಎ) , 3 ( ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ – 1, ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು.
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಮಾಜಿ ಸೈನಿಕರಾಗಿದ್ದಲ್ಲಿ ಸೇವೆ ಸಲ್ಲಿಸಿದ ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷವಾಗುವುದೋ ಅಷ್ಟು ವರ್ಷಗಳು, ವಿಧವೆಯಾಗಿದ್ದಲ್ಲಿ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Online ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್
zpdk.karnataka.gov.in

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ