ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು !!!

Share the Article

ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ಸೆ.18 ರ ಶನಿವಾರ ರಾತ್ರಿ ನಡೆದಿದೆ. ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ.

ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾದ ಯುವಕ ಜಮೀರ್(23). ಈತ ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ. ಐದಾರು ಜನ ದುಷ್ಕರ್ಮಿಗಳು ಸೇರಿಕೊಂಡು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply