Home Interesting ತಿರುಪತಿ ದೇವರ ಭಕ್ತಾದಿಗಳಿಗೆ ದೇವಾಲಯದಿಂದ ಗುಡ್ ನ್ಯೂಸ್

ತಿರುಪತಿ ದೇವರ ಭಕ್ತಾದಿಗಳಿಗೆ ದೇವಾಲಯದಿಂದ ಗುಡ್ ನ್ಯೂಸ್

Hindu neighbor gifts plot of land

Hindu neighbour gifts land to Muslim journalist

ತಿರುಪತಿ ದೇವರ ಭಕ್ತರಿಗೆ ಸಿಹಿಸುದ್ದಿಯೊಂದಿದ್ದು, ದೇವರ ದರ್ಶನಕ್ಕೆ ಸಂಬಂಧಿಸಿದಂತೆ ತಿರುಮಲ ತಿರುಪತಿ ದೇವಸ್ಥಾನ ಮಹತ್ವದ ಘೋಷಣೆ ಮಾಡಿದೆ.

ನವೆಂಬರ್‌ನಲ್ಲಿ ನಡೆಯಲಿರುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಸಹಸ್ರ ದೀಪಾಲಂಕಾರ ಸೇವೆ ಮತ್ತು ಆರ್ಜಿತ ಸೇವೇಗಳಿಗೆ ಸಂಬಂಧಿಸಿದಂತೆ ನವೆಂಬರ್ ತಿಂಗಳಿಗೆ 300 ರೂಪಾಯಿಗಳ ವಿಶೇಷ ದರ್ಶನ ಟಿಕೆಟ್‌ಗಳನ್ನು ಬಿಡುಗಡೆ ಮಾಡುವುದಾಗಿ ಟಿಟಿಡಿ ಘೋಷಣೆ ಮಾಡಿದೆ.

ಮೊದಲು ಬಂದವರಿಗೆ ಆಧ್ಯತೆ ಎಂಬ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗುವುದು ಎಂದು ಟಿಟಿಡಿ ಪ್ರಕಟಿಸಿದೆ. ಸೆಪ್ಟೆಂಬರ್ 21 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿಯೂ ಲಭ್ಯವಾಗಲಿವೆ. ಅಕ್ಟೋಬರ್ 1 ರಿಂದ 5 ರವರೆಗೆ ಬ್ರಹ್ಮೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಈ ದಿನಗಳಲ್ಲಿ ಅಂಗಪ್ರದಕ್ಷಿಣಂ ಟೋಕನ್‌ಗಳನ್ನು ನೀಡಲಾಗುವುದಿಲ್ಲ. ಭಕ್ತರು ಇದನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬೇಕಾಗಿ ವಿನಂತಿ ಎಂದು ಟಿಟಿಡಿ ತಿಳಿಸಿದೆ.

ನವೆಂಬರ್ ತಿಂಗಳ ಶ್ರೀವಾರಿ ಆರ್ಜಿತ ಸೇವಾ ಎಲೆಕ್ಟ್ರಾನಿಕ್ ಡಿಪ್ ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 21 ರಿಂದ ಲಭ್ಯವಿರುತ್ತದೆ ಎಂದು ಘೋಷಿಸಲಾಗಿದೆ. ಅಲ್ಲದೆ, ಅಕ್ಟೋಬರ್ ತಿಂಗಳ ಅಂಗಪ್ರದಕ್ಷಿಣಂ ಟೋಕನ್‌ಗಳನ್ನು ಸೆಪ್ಟೆಂಬರ್ 22 ರಂದು ಬೆಳಿಗ್ಗೆ 9 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಟಿಟಿಡಿ ಮಾಹಿತಿ ನೀಡಿದೆ.