ಗ್ಯಾಸ್ ಸಿಲಿಂಡರ್ ಸ್ಫೋಟ ; ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದ ಮನೆ

Share the Article

ಗ್ಯಾಸ್ ಸಿಲಿಂಡರ್ ಕುರಿತು ಅದೆಷ್ಟೇ ಎಚ್ಚರಿಕೆ ವಹಿಸಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಇಂತಹ ಅದೆಷ್ಟೋ ಘಟನೆಗಳು ಸಂಭವಿಸಿ ಜೀವಹಾನಿಯಾದ ಘಟನೆ ನಡೆದಿದೆ. ಅದೇ ಸಾಲಿಗೆ ಸೇರಿದಂತೆ ಇಲ್ಲೊಂದು ಕಡೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು, ಇಡೀ ಮನೆಯೇ ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದ ಘಟನೆ ವರದಿಯಾಗಿದೆ.

ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದ್ದು, ಆಲಗೌಡ ಪಾಟೀಲ್ ಎಂಬುವವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ಮನೆ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂಧಿಗಳು ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಮನೆಯಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave A Reply