ನೆಲ್ಯಾಡಿ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ,ಇಬ್ಬರಿಗೆ ಗಾಯ

Share the Article

ಪುತ್ತೂರು : ಕೆಎಸ್‌ಆರ್‌ಟಿಸಿ ಬಸು ಹಾಗೂ ಕಾರಿನ ಮಧ್ಯೆ ಡಿಕ್ಕಿ
ಸೆ.25ರ ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿ ಅಶ್ವಿನಿ ಆಂಬುಲೆನ್ಸ್ ನಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Leave A Reply