ಸುಳ್ಯ : ಸ್ಕೂಟಿ ಮತ್ತು ಕಾರಿನ ನಡುವೆ ಅಪಘಾತ | ಅಣ್ಣ-ತಂಗಿ ಸಾವು

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ.

 

ಎಲಿಮಲೆ ಮತ್ತು ಜಬಳೆ ಮಧ್ಯೆ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ನಿಶಾಂತ್ ಹಾಗೂ ಆತನ ಸಹೋದರಿ ಮೋಕ್ಷಾರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ತಲುಪುವ ವೇಳೆ ನಿಶಾಂತ್ ಸಾವನ್ನಪ್ಪಿದ್ದರೆ, ಆತನ ತಂಗಿ ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಆಕೆಯೂ ಸಾವನ್ನಪ್ಪಿದಳೆಂದು ತಿಳಿದು ಬಂದಿದೆ.

ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮೋಕ್ಷಾ ದೇವಚಳ್ಳ ಸ.ಮಾ.ಹಿ.ಪ್ರಾ. ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

Leave A Reply

Your email address will not be published.