ಬೆಳ್ತಂಗಡಿ : ಮರಕ್ಕೆ ಬೈಕ್ ಡಿಕ್ಕಿ, ಸವಾರ ಮೃತ್ಯು

Share the Article

ಬೆಳ್ತಂಗಡಿ ತಾಲೂಕಿನ ನಾರಾವಿ ಅರಸಿಕಟ್ಟೆ ಎಂಬಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್(23) ಎಂದು ಗುರುತಿಸಲಾಗಿದೆ.

ಸಂತೋಷ್ ಅವರು ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣದ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಕೊನೆಯುಸಿರೆಳೆದಿದ್ದಾರೆ.

Leave A Reply