ಮುಕೇಶ್ ಅಂಬಾನಿ ಕುಟುಂಬಕ್ಕೆ ಬಹಿರಂಗ ಕೊಲೆ ಬೆದರಿಕೆ : ಏನೆಂದು ಬೆದರಿಕೆ ಹಾಕಿದ ನೀವೇ ನೋಡಿ ?

Share the Article

ದೇಶೀ ಮಟ್ಟದಲ್ಲಿ ಮಾತ್ರವಲ್ಲದೆ ವಿದೇಶೀ ಮಟ್ಟದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತವರ ಕುಟುಂಬಕ್ಕೆ ಇಲ್ಲೊಬ್ಬರು ಬಹಿರಂಗವಾಗಿ ಕೊಲೆ  ಬೆದರಿಕೆ ಹಾಕಿದ್ದಾರೆ.

ಈ ಕುರಿತು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಸಿಇಒ ಡಾ ತರಂಗ್ ಗಿಯಾಂಚಂದಾನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಿಹಾರದ ದರ್ಭಾಂಗಾ ಜಿಲ್ಲೆ ನಿವಾಸಿಯಾದ ರಾಕೇಶ್ ಕುಮಾರ್ ಮಿಶ್ರಾ  ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ 5ರಂದು  ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಕರೆ ಮಾಡಿ ಮಿಶ್ರಾ  ಮುಕೇಶ್ ಅಂಬಾನಿ, ನೀತಾ ಅಂಬಾನಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರು ಕರೆ ಮಾಡಿದ ಆತನ ಮೊಬೈಲ್ ಫೋನನ್ನು ವಶಪಡಿಸಿಕೊಂಡಿದ್ದಾರೆ.

ಮಾತ್ರವಲ್ಲ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿಯೂ ಬೆದರಿಕೆ ಒಡ್ಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  ಈತ ಕೇವಲ ಅಂಬಾನಿಗೆ ಮಾತ್ರವಲ್ಲದೆ ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಮತ್ತು ಮುಂಬೈ ಪೊಲೀಸರಿಗೂ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಈ ಬೆದರಿಕೆ ಒಡ್ಡಲು ನಿಖರ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ.

Leave A Reply