Good News : SC ST ಸಮುದಾಯದವರಿಗೆ ಭರ್ಜರಿ ಗಿಫ್ಟ್ | ಮೀಸಲಾತಿ ಹೆಚ್ಚಳ – ಸಿಎಂ ಘೋಷಣೆ

ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai) ಅವರು ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹೌದು ಮೀಸಲಾತಿ ಹೆಚ್ಚಳ ಮಾಡಿಸಿ ಘೋಷಣೆ ಮಾಡಿದ್ದಾರೆ.

 

ಎಸ್ ಸಿ ( SC) ಮೀಸಲಾತಿ ಶೇ 15 ರಿಂದ 17, ಎಸ್ ಟಿ ( ST) ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಎಸ್ ಸಿ. ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಎಂದು ಹೇಳಿದ್ದರು. ಮೀಸಲಾತಿ ಹೆಚ್ಚಳದ ಕುರಿತು ನಾಳೆಯೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ. ನ್ಯಾ.ನಾಗಮೋಹನ್ ದಾಸ್ ವರದಿ ಆಧರಿಸಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ. ಜನಪರವಾಗಿರುವ ಆಡಳಿತವನ್ನು ನಮ್ಮ ಸರ್ಕಾರ ಮಾಡುತ್ತಲೇ ಬಂದಿದೆ. ಎಸ್‌ ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಕೋರ್‌ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

Leave A Reply

Your email address will not be published.