Home latest DA Hike : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ...

DA Hike : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ

Hindu neighbor gifts plot of land

Hindu neighbour gifts land to Muslim journalist

ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರ ದಸರಾ ಹಾಗೂ ದೀಪಾವಳಿ ಗಿಫ್ಟ್ ನೀಡಿದೆ. ಹೌದು, ಸಿಎಂ ಬೊಮ್ಮಾಯಿಯವರು ತುಟ್ಟಿಭತ್ಯೆ ( Dearness Allownce DA )ಯನ್ನು ಶೇ.3.7 ರಷ್ಟು ಹೆಚ್ಚಿಸಿ ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ (Karnataka Government Employees) ಸಿಹಿಸುದ್ದಿಯನ್ನು ನೀಡಿದ್ದಾರೆ.

ಈ ಕುರಿತಂತೆ ಸಿಎಂ ಟ್ವಿಟ್ಟರ್ ಖಾತೆಯಿಂದ ಟ್ವಿಟ್ ಮಾಡಿ ಮಾಹಿತಿ ನೀಡಲಾಗಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai ) ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು | DA Hike ) ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದೆ.