VA : ಇನ್ನು ಮುಂದೆ ಗ್ರಾಮಲೆಕ್ಕಿಗರ ಹುದ್ದೆಯ ನೇಮಕಾತಿ ವಿಧಾನ ಬದಲು
ಗ್ರಾಮಲೆಕ್ಕಿಗರ ಹುದ್ದೆಗೆ ( Village Accountant Recruitment ) ಇಲ್ಲಿಯವರೆಗೆ ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ( Second PUC ) ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ ( Karnataka Government) ಬ್ರೇಕ್ ಹಾಕಿದೆ. ಇದರ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರ ನೇಮಕಕ್ಕೆ ಸಮಿತಿಯನ್ನು ರಚಿಸಿ ಆದೇಶಿಸ ಹೊರಡಿಸಿದೆ.
ಕಂದಾಯ ಇಲಾಖೆಯ ( Revenue Department ) ಸರ್ಕಾರದ ಅಧೀನ ಕಾರ್ಯದರ್ಶಿ ಈ ಕುರಿತು ನಡವಳಿ ಹೊರಡಿಸಿದ್ದು, ಪ್ರಸ್ತುತ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳು ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( Karnataka Examination Authority – KEA) ಸ್ಪರ್ಧಾತ್ಮಕ ಪರೀಕ್ಷೆಯ ( Competitive Exam ) ಮೂಲಕ ನೇಮಕ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕೆಇಎ ಮೂಲಕ ಗ್ರಾಮಲೆಕ್ಕಿಗರ ನೇಮಕ ಮಾಡುವ ಸಂಬಂಧ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅಧ್ಯಕ್ಷರನ್ನಾಗಿ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಭೂ ಮಾಪನ ಕಂದಾಯ ವ್ಯಸಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ( Bengaluru Rural District ) ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.