ಗುಂಡು ತಗುಲಿದರೂ ಉಗ್ರರ ಜೊತೆ ಹೋರಾಡಿದ ಭಾರತೀಯ ಸೇನೆಯ ಶ್ವಾನ| ವೀಡಿಯೊ ವೈರಲ್

ಭಾರತೀಯ ಸೇನೆಗೆ ಸೇರಿರುವ ನಾಯಿಯೊಂದು ಹೆಮ್ಮೆಯ ಕಾರ್ಯವನ್ನು ಮಾಡಿದೆ. ಭಾನುವಾರ ತಡರಾತ್ರಿ ದಕ್ಷಿಣ ಕಾಶ್ಮೀರ ಜಿಲ್ಲೆಯ ತಂಗ್ಪಾವಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಬಂದ ನಂತರ ಎನ್​ಕೌಂಟರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ (Anantnag) ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್‌ನಲ್ಲಿ (Encounter) ಭಾರತೀಯ ಸೇನೆಯ ನಾಯಿಯೊಂದು ಸೋಮವಾರ ತೀವ್ರವಾಗಿ ಗಾಯಗೊಂಡಿದೆ.

ಅಂದರೆ ಉಗ್ರರು ಅಡಗಿರುವ ಮನೆಯಿಂದ ಆ ಉಗ್ರರನ್ನು ಹೊರಗೆ ಕರೆತರುವ ಕೆಲಸವನ್ನು ಜೂಮ್ ಎಂಬ ಭಾರತೀಯ ಸೇನೆಯ ನಾಯಿಗೆ ವಹಿಸಲಾಗಿತ್ತು. ಆ ನಾಯಿ ಮನೆಯೊಳಗೆ ಹೋಗಿ ಉಗ್ರರ ಮೇಲೆ ದಾಳಿ ಮಾಡಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಆ ನಾಯಿಯ ಮೇಲೆ ಶತ್ರುಗಳು 2 ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಆ ದಾಳಿಯ ಸಮಯದಲ್ಲಿ ಜೂಮ್ ನಾಯಿಯ ಮೇಲೆ 2 ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ನಾಯಿಗೆ ಗಂಭೀರವಾದ ಗಾಯಗಳಾಗಿವೆ.

ತನ್ನ ಮೈಮೇಲೆ ಗುಂಡಿನ ದಾಳಿ ನಡೆಸಿದ್ದರೂ ಅಂಜದ ಆ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಷ್ಟೇ ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಯಿತು. ಜೂಮ್ ಎಂಬ ಆ ನಾಯಿಯನ್ನು ತಕ್ಷಣ ಸೇನೆಯ ಪಶುವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಸೇನೆಯ ಚಿನಾರ್ ಕಾರ್ಪ್ಸ್ ವಿಭಾಗವು ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ತನ್ನ ಶ್ವಾನ ಪಡೆಯ ಕೊಡುಗೆಯನ್ನು ಗೌರವಿಸಲು ಬ್ರೇವ್‌ಹಾರ್ಟ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಸಹ ಮಾಡಿದೆ.

ಅಧಿಕಾರಿಗಳ ಪ್ರಕಾರ ದಕ್ಷಿಣ ಕಾಶ್ಮೀರದಲ್ಲಿ ಜೂಮ್ ಅನೇಕ ಸಕ್ರಿಯ ಕಾರ್ಯಾಚರಣೆಗಳ ಭಾಗವಾಗಿದೆ. ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಜೂಮ್ ಬಹಳ ಅತ್ಯುತ್ತಮ ತರಬೇತಿ ಪಡೆದ, ಉಗ್ರ ಮತ್ತು ಪ್ರಾಮಾಣಿಕತೆ ಹೊಂದಿರುವ ಶ್ವಾನ. ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಕೆಳಗುರುಳಿಸಲು ತರಬೇತಿ ನೀಡಲಾಗಿದೆ,’ ಎಂದು ಮಾಹಿತಿ ನೀಡಿರುತ್ತಾರೆ.

ಭಯೋತ್ಪಾದಕರ ನಡುವಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಅನೇಕ ಸೈನಿಕರು ಗಾಯಗೊಂಡಿದ್ದಾರೆ ಎನ್ನುವುದು ಮಾಹಿತಿ ಪ್ರಕಾರ ತಿಳಿದು ಬಂದಿರುತ್ತದೆ.

Leave A Reply

Your email address will not be published.