Home Jobs KPSC Selection List : ಕೆಪಿಎಸ್ ಸಿ ಇಂದ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ, ಹೆಚ್ಚುವರಿ ಆಯ್ಕೆಪಟ್ಟಿ...

KPSC Selection List : ಕೆಪಿಎಸ್ ಸಿ ಇಂದ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ, ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ಲೋಕಸೇವಾ ಆಯೋಗವು( KPSC) ಆಯುಷ್ ಇಲಾಖೆಯಲ್ಲಿನ ಔಷಧ ವಿತರಕರು ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮಾದರಿ ವಸತಿ ಶಾಲೆಗಳಲ್ಲಿನ ಉಳಿಕೆ ಮೂಲ ವೃಂದದ ಕಚೇರಿ ಅಧೀಕ್ಷಕರು ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. 2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಆಯುಷ್ ಇಲಾಖೆಯಲ್ಲಿನ ಗ್ರೂಪ್‌ ಸಿ ಔಷಧ ವಿತರಕರು (03 ಬ್ಯಾಕ್‌ಲಾಗ್ + 57 HK) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಿ, ಆಯ್ಕೆಪಟ್ಟಿಗಳನ್ನು ಚೆಕ್‌ ಮಾಡಬಹುದು.

ಈ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ 17-10-2022ರೊಳಗೆ -ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001 ಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ