Home News ಮತದಾರರಿಗೆ ಮಹತ್ವದ ಮಾಹಿತಿ!

ಮತದಾರರಿಗೆ ಮಹತ್ವದ ಮಾಹಿತಿ!

Hindu neighbor gifts plot of land

Hindu neighbour gifts land to Muslim journalist

ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ತಿದ್ದುಪಡಿ ಇರುವವರಿಗೆ ಇದು ಉತ್ತಮ ಕಾಲಾವಕಾಶ ಆಗಿದ್ದು, ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ.

ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ, ವಿಳಾಸ ಬದಲಾವಣೆ,ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು, ಆಧಾರ್ ಲಿಂಕ್ ಮಾಡಲು ಅವಕಾಶವಿದೆ.

ಹೊಸ ಮತದಾರರ ನೋಂದಣಿಗಾಗಿ ನಮೂನೆ 6, ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ನಮೂನೆ 7, ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡಲು ನಮೂನೆ 6ಬಿ, ಹಾಗೂ ವಿಳಾಸ ಬದಲಾವಣೆ, ಬದಲಿ ಮತದಾರರ ಗುರುತಿನ ಚೀಟಿ ನೀಡುವಿಕೆಗಾಗಿ, ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಳಿಗಾಗಿ, ಅಂಗವಿಕಲ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ಗುರುತಿಸಲು ನಮೂನೆ 8 ನೀಡಬೇಕಾಗುತ್ತದೆ.

ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ ಮಾಡಬಯಸುವ ಮತದಾರರು voter helpline application ಡೌನ್ಲೋಡ್ ಮಾಡಿಕೊಂಡು ಅಥವಾ www nvsp.in ವೆಬ್ ಸೈಟ್ ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿಯೂ ಸಹ ಈ ಕುರಿತು ಅರ್ಜಿ ಸಲ್ಲಿಸಬಹುದಾಗಿದೆ.