ಮಂಡ್ಯದ ‘ ಐದು ರೂಪಾಯಿ ಡಾಕ್ಟರ್ ‘ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್‌ ದಿ ಇಯರ್’ ಪ್ರಶಸ್ತಿ

Share the Article

ತಮ್ಮ ಕ್ಲಿನಿಕ್‌ ಗೆ ಶುಶ್ರೂಷೆಗಾಗಿ ಬರುವ ರೋಗಿಗಳ ಪ್ರೀತಿಯ ಕೇವಲ ‘ ಐದು ರೂಪಾಯಿ ಡಾಕ್ಟರ್ ‘ ಖ್ಯಾತಿಯ ಮಂಡ್ಯದ ಪ್ರಸಿದ್ದ ವೈದ್ಯ ಶಂಕರೇಗೌಡ ಅವರಿಗೆ CNN ನ್ಯೂಸ್‌ – 18 ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್‌ ದಿ ಇಯರ್-2022’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಡಾ.ಶಂಕರೇಗೌಡರಿಗೆ  ‘ಇಂಡಿಯನ್ ಆಫ್‌ ದಿ ಇಯರ್-2022’ ಪ್ರಶಸ್ತಿ ನೀಡಲಾಗಿದೆ. ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಕೇವಲ 5 ರೂಪಾಯಿ ಶುಲ್ಕ ಪಡೆದು ಚಿಕಿತ್ಸೆ ನೀಡುತ್ತಿರುವ ದೈವ ಸ್ವರೂಪಿ ಶಂಕರೇಗೌಡ ಅವರಿಗೆ ಯಥೋಚಿತ ಗೌರವ ಸಂದಿದೆ. ” ನಾನು 1982 ರಿಂದ ಅಭ್ಯಾಸ ಮಾಡುತ್ತಿದ್ದೇನೆ. ಅಂದಿನಿಂದ ಇಂದಿನವರೆಗೆ ಐದು ರೂಪಾಯಿ ಶುಲ್ಕ ಹಾಕುತ್ತೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾನವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ನನ್ನ ಜನರಿಗೆ ನೀಡಬೇಕು ಎನ್ನುವ ಉದ್ದೇಶದಿಂದ ಪದವಿ ಪಡೆದ ನಂತರ ನನ್ನ ಊರಿನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದೆ” ಎಂದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೈದ್ಯ ಡಾ.ಶಂಕರೇಗೌಡ ಹೇಳಿದರು.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.  ರೂಪಾಯಿ ಡಾಕ್ಟರ್ ‘ ಎಂದೇ ಪ್ರಖ್ಯಾತಿಗಳಿಸಿರುವ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ ಇಂಡಿಯನ್ ಆಫ್‌ ದಿ ಇಯರ್-2022 ಪ್ರಶಸ್ತಿ ಲಭಿಸಿರುವುದು ಅತ್ಯಂತ ಅಭಿನಂದನಾರ್ಹ ಸಂಗತಿಯಾಗಿದೆ. ಜನರ ಸೇವೆಗಾಗಿಯೇ ಗ್ರಾಮೀಣ ಭಾಗದಲ್ಲಿದ್ದು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮೆಚ್ಚುಗೆ ಸೂಚಿಸಿದ್ದಾರೆ.

Leave A Reply