ರಾಜ್ಯಕ್ಕೆ ಬಂದು ಅಪ್ಪಳಿಸಲಿದೆ ವರ್ಷ ಘೋಷ |
ರಾಜ್ಯದ 25 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ;10 ಯಲ್ಲೋ ಅಲರ್ಟ್ ಜಿಲ್ಲೆಗಳಲ್ಲಿ ನಿಮ್ಮ ಜಿಲ್ಲೆ ಉಂಟಾ ನೋಡ್ಕೊಳ್ಳಿ !
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಆಗಲಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ಜನರು ಪಡಿಪಾಟಲು ಪಡುವಂತಾಗಿದೆ. ರಾಜಾಕಾಲುವೆ ಅಕ್ಕಪಕ್ಕದ ಮತ್ತು ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರಲು ಆಡಳಿತ ಸೂಚಿಸಿದೆ.
ಜೋರು ಮಳೆಯಾಗುವ ಸಂಭವ ರಾಜ್ಯದ ಒಟ್ಟು 25 ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಲಾಗಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಬೆಂಗಳೂರು ಸೇರಿದಂತೆ ಒಟ್ಟು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರದಲ್ಲಿ ಭಾರೀ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲೂ ಮಳೆಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲೂ ಮಳೆ ಸುರಿಯುತ್ತಿದೆ.
ಅ. 18 ರಂದು ಕರಾವಳಿಗೆ ಕೂಡ ಯಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಜನರು ಇನ್ನೂ 3 ದಿನಗಳ ಕಾಲ ಮಳೆ ಕಾಟವನ್ನು ಅನುಭವಿಸಬೇಕಾಗುತ್ತದೆ. ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ನಿರಂತರ ಬಿಟ್ಟು ಬಿಟ್ಟು ಜೋರು ಮಳೆ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ.18 ರವರೆಗೆ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.