ಖ್ಯಾತ ಕಿರುತೆರೆ ನಟಿ ವೈಶಾಲಿ ನೇಣು ಬಿಗಿದು ಆತ್ಮಹತ್ಯೆ

Share the Article

ಖ್ಯಾತ ಕಿರುತೆರೆ ನಟಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ವೈಶಾಲಿ ಟಕ್ಕರ್‌ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಟಿಯೆಂದು ತಿಳಿದು ಬಂದಿದೆ.

ಹಿಂದಿಯ ʼಸಸುರಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ ನಟಿಸಿ, ಬಳಿಕ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದ ವೈಶಾಲಿ ಕಳೆದ ವರ್ಷದಿಂದ ಇಂದೋರ್‌ ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವರದಿ ತಿಳಿಸಿದೆ.

ಘಟನಾ ಸ್ಥಳದಲ್ಲಿ ಡೆತ್‌ ನೋಟ್‌ ಪತ್ತೆಯಾಗಿದ್ದು, ನಟಿ ಪ್ರೇಮದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Leave A Reply