ರಾಜ್ಯದಲ್ಲಿ ‘ಪರಿಸರ ಸ್ನೇಹಿ’ ಪಟಾಕಿಗೆ ಮಾತ್ರ ಅವಕಾಶ |ಖಡಕ್ ಸೂಚನೆ ನೀಡಿದ ಮಾಲಿನ್ಯ ನಿಯಂತ್ರಣ ಮಂಡಳಿ

‘ತಮಸೋಮ ಜ್ಯೋತಿರ್ಗಮಯ’ ಎನ್ನುವಂತೆ ಅಂಧಕಾರವನ್ನು ದೂರ ಮಾಡಿ ಬೆಳಕಿನೆಡೆಗೆ ಕರೆದೊಯ್ಯುವಂತಹ ಹಬ್ಬವೇ ದೀಪಾವಳಿ. ಈ ಹಬ್ಬವೆಂದರೇ ಅದೇನೋ ಒಂಥರಾ ಸಂಭ್ರಮ(Celebration). ಎಲ್ಲರ ಬದುಕಲ್ಲಿ ಬೆಳಕು ಮೂಡಿಸುವ ಈ ಹಬ್ಬ ನಿಜಕ್ಕೂ ವಿಶೇಷ(Special).
ದೀಪಾವಳಿ ಹಬ್ಬಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಉಳಿದಿದೆ. ದೀಪಾವಳಿಗೆ ಈಗಾಗಲೇ ಸುಡುಮದ್ದು ತಯಾರಿಕಾ ಕಂಪನಿಗಳು ನಾನಾ ಬಗೆಯ ಪಟಾಕಿಗಳನ್ನು ನಿರ್ಮಿಸಿ ಮಾರುಕಟ್ಟೆಗೆ ಬಿಡುವ ಉತ್ಸಾಹದಲ್ಲಿವೆ. ಆದರೆ ಕರ್ನಾಟಕದಲ್ಲಿ ಮಾತ್ರ ಪರಿಸರ ಸ್ನೇಹಿ ಪಟಾಕಿಗೆ ಅವಕಾಶ ನೀಡಿದೆ. ಒಂದು ವೇಳೆ ಈ ನಿಯಮ ಅನುಸರಿಸದಿದ್ದರೆ ಮುಲಾಜಿ‍ಲ್ಲದೇ ಕ್ರಮ ಕೈಗೊಳ್ಳಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಖಡಕ್ ಸೂಚನೆ ನೀಡಿದೆ.

 

ಹಸಿರು ಪಟಾಕಿ ಹೊರತು ಪಡಿಸಿ ಬೇರೆ ಪಟಾಕಿ ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿ, ಅಗ್ನಿ ಶಾಮಕ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಪಟಾಕಿಯಿಂದಾಗುವ ತ್ಯಾಜ್ಯವನ್ನ ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿಯನ್ನು ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಿದ್ದು, ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ. ಪಟಾಕಿ ಸ್ಟಾಲ್​​ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ.

ಅಷ್ಟು ಮಾತ್ರವಲ್ಲ ಗಾಯದ ಮೇಲೆ ಬರೆ ಎಳೆಯಫ ಹಾಗೇ, ಒಂದು ಹೆಜ್ಜೆ ಮುಂದೆ ಹೋಗಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಿದೆ. ಪರಿಸರ ಸ್ನೇಹಿ ಪಟಾಕಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ‌ ಮೂಡಿಸುವುದು ಇದರ ಮುಖ್ಯ ಉದ್ದೇಶ. ದೀಪಾವಳಿ ಹಬ್ಬಕ್ಕೂ ಮೊದಲು ಬೆಂಗಳೂರು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೆಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನ ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.

Leave A Reply

Your email address will not be published.