ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನ ವಿದ್ಯಾರ್ಥಿವೇತನ | ಅರ್ಜಿ ಸಲ್ಲಿಸಲು ಕೊನೆ ದಿನ-ಡಿ.31
ವಿದ್ಯಾರ್ಥಿಗಳ ಉನ್ನತ ಮಟ್ಟದ ವಿದ್ಯಾಭ್ಯಾಸಕ್ಕೆ ನೆರವಾಗುವ ದೃಷ್ಟಿಯಿಂದ ಹಲವು ಸಂಸ್ಥೆಗಳು ವಿದ್ಯಾರ್ಥಿವೇತನವನ್ನು ನೀಡುತ್ತಾ ಬಂದಿದೆ. ಅದರಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ವಿದ್ಯಾರ್ಥಿ ವೇತನಕ್ಕೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳು ಅರ್ಹರಾಗಿದ್ದು, ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದೆಂದು ಹಿಂದುಳಿದ ವರ್ಗಗಳ ಆಯುಕ್ತರು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು, ಹಾಗೂ ಹೆಚ್ಚಿನ ಮಾಹಿತಿಗಾಗಿ, ಹಾಗೂ ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಆದೇಶಗಳ ಬಗ್ಗೆ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಪಡೆಯಬಹುದು.
ಅಧಿಕೃತ ವೆಬ್‍ಸೈಟ್ ವಿಳಾಸ: www.bcwd.karnataka.gov.in
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಹಾಗೂ ಇಮೇಲ್-8050770005 bcwd.scholarship@karnataka.gov.in
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ : postmatrichelp@karnataka.gov.in