ಒಟ್ಟು 300 ಸಹಾಯಕ ಕೃಷಿ ಅಧಿಕಾರಿಗಳನ್ನು ನೇಮಕ ಮಾಡಲು ಸಂಪುಟ ಸಭೆ ಆಯೋಜನೆ

Share the Article

ಸಹಾಯಕ ಕೃಷಿ ಅಧಿಕಾರಿಗಳ ನೇಮಕಕ್ಕೆ ಕೇಡರ್ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಅಂಗೀಕರಿಸಿದ್ದು, ಮುಂಬರುವ ದಿನಗಳಲ್ಲಿ 300 ಅಧಿಕಾರಿಗಳನ್ನು ನೇಮಕಾತಿ ಮಾಡಲು ಸರ್ಕಾರ ಯೋಜಿಸಿದೆ.

ಪ್ರಸ್ತುತ ಇಲಾಖೆಯಲ್ಲಿ 1801 ಕೃಷಿ ಅಧಿಕಾರಿಗಳು ಮತ್ತು 2009 ಸಹಾಯಕ ಕೃಷಿ ಅಧಿಕಾರಿಗಳನ್ನು ಸೇರ್ಪಡೆ ಮಾಡಲು ಅವಕಾಶವಿದ್ದು, ಮೊದಲಿನ ನಿಯಮಗಳ ಪ್ರಕಾರ ಬಿ ಎಸ್ಸಿ(ಕೃಷಿ) ಪದವಿ ಪೂರ್ಣಗೊಳಿಸಿದವರು ಮಾತ್ರ ನೇಮಕಾತಿಗೆ ಅರ್ಹರಾಗಿದ್ದರು. ಆದರೆ ಈಗ ಬದಲಾದ ತಿದ್ದುಪಡಿಯಿಂದಾಗಿ ಬಿಎಸ್ಸಿ ಅಗ್ರಿಕಲ್ಚರ್ ಮಾರ್ಕೆಟಿಂಗ್ ಮತ್ತು ಸಹಕಾರ, ಬಿಎಸ್ಸಿ ಹಾನರ್ಸ್ ಅಗ್ರಿಕಲ್ಚರ್ ಬಿಸಿನೆಸ್ ಮ್ಯಾನೇಜ್ಮೆಂಟ್, ಬಿ ಎಸ್ಸಿ ಬಯೋ ಅಗ್ರಿಕಲ್ಚರ್ ಟೆಕ್ನಾಲಜಿ, ಬಿಎಸ್ಸಿ ಅಗ್ರಿಕಲ್ಚರ್ ಇಂಜಿನಿಯರಿಂಗ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳೂ ಕೂಡ 15 ರಷ್ಟು ನೇಮಕಾತಿಗೆ ಅರ್ಹರಾಗಿರುತ್ತಾರೆ. ಅತಿಹೆಚ್ಚು ಅಂದರೆ 85 ರಷ್ಟು ಬಿಎಸ್ಸಿ(ಕೃಷಿ) ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಅವರು ತಿಳಿಸಿದರು.

ಮಾಧ್ಯಮಗಳಿಗೆ ಮಾಹಿತಿ ನೀಡಿದಂತಹ ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಸಚಿವರಾದ ಜೆಸಿ ಮಾಧುಸ್ವಾಮಿಯವರು ಈ ಪ್ರಸ್ತಾವನೆಯನ್ನು ಸಾರ್ವಜನಿಕರೆ ಮುಂದೆ ಇಟ್ಟು ಪ್ರತಿಕ್ರಿಯೆ ಆಹ್ವಾನಿಸಲಾಗುವುದು ಎಂದು ಇಲಾಖೆ ಮೂಲಗಳು ತಿಳಿಸಿವೆ. ಈಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯು 300 ಅಧಿಕಾರಿಗಳನ್ನು ಸೇರ್ಪಡೆ ಮಾಡಲು ಯೋಜಿಸಿರುವ ಹಿನ್ನೆಲೆಯಲ್ಲಿ ಸಿ ಅಂಡ್ ಆರ್ ನಿಯಮ ತಿದ್ದುಪಡಿಯಾಗಿದೆ . ನಿಯಮಗಳಲ್ಲಿ ಬದಲಾವಣೆ ಏನೆಂದರೆ ಅನರ್ಹರಾಗಿರುವ ಮೇಲೆ ತಿಳಿಸಿರುವ ಪದವೀಧರರು ಸ್ಪರ್ಧಿಸಲು ಅರ್ಹರಾಗುತ್ತಾರೆ ಎಂದು ಹೇಳಿದರು.

Leave A Reply