Airtel : ಏರ್ಟೆಲ್ ನ ಈ ಪ್ಲಾನ್ ಹಾಕಿದರೆ ದೊರೆಯಲಿದೆ ನಿಮಗೆ ಭರ್ಜರಿ ಡಾಟಾ ಆಫರ್ !!!
ಅಕ್ಟೋಬರ್ 1 ರಂದು ದೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದಲ್ಲಿ ವಾಣಿಜ್ಯ 5G ಸೇವೆಗಳನ್ನು ಆರಂಭಿಸಿದ್ದು, ಟೆಲಿಕಾಮ್ ಕಂಪೆನಿ ಏರ್‌ಟೆಲ್ 5G ಸೇವೆ ಪ್ರಾರಂಭಿಸಿದ ಬೆನ್ನಲ್ಲೇ, ರಿಲಯನ್ಸ್ ಜಿಯೋ ತಮ್ಮ 5G ಸೇವೆಗಳನ್ನು ನೀಡಲು ಸಜ್ಜಾಗುತ್ತಿರುವ ವಿಚಾರ ತಿಳಿದಿರಬಹುದು.
ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವಣ ಪೈಪೋಟಿ ಮುಂದುವರೆದಿದೆ. ಜಿಯೋ ಗ್ರಾಹಕರನ್ನು ಸೆಳೆಯಲು ನಾನಾ ಕಸರತ್ತು ಮಾಡುತ್ತಿರುವ ನಡುವೆ ನಂಬರ್ ಒನ್ ಸ್ಥಾನಕ್ಕಾಗಿ ಹೋರಾಡುತ್ತಿರುವ ಏರ್ಟೆಲ್ ಬಳಕೆದಾರರಿಗೆ ಆಕರ್ಷಕ ಯೋಜನೆಗಳನ್ನು ಬಿಡುಗಡೆ ಮಾಡುತ್ತಿದೆ.
ಇದರ ನಡುವೆ ಎರಡೂ ಕಂಪನಿಗಳು 5ಜಿ ಸೇವೆ ನೀಡುವ ಮೂಲಕ ಹೊಸ ಬಳಕೆದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ.
ಬೆಲೆ ಹೆಚ್ಚಳ ಮಾಡಿದ್ದರೂ ತನ್ನ ಪ್ಲಾನ್ನ ಜೊತೆಗೆ ಇತರೆ ವಿಶೇಷ ಆಫರ್ಗಳನ್ನು ನೀಡುತ್ತಿರುವ ಏರ್ಟೆಲ್ನ ಯೋಜನೆಗಳು ಹೆಚ್ಚಿನವರ ಗಮನ ಸೆಳೆಯುತ್ತಿವೆ. ಆ ಪೈಕಿ ಹಲವು ಪ್ಲಾನ್‌ಗಳು ಅಧಿಕ ಡೈಲಿ ಡೇಟಾ ಪ್ಯಾಕ್ ಗಳಾಗಿವೆ.
ಏರ್ಟೆಲ್ ಟೆಲಿಕಾಂ ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಪ್ಲಾನ್‌ಗಳ (Prepaid Plans) ಆಯ್ಕೆ ನೀಡಲಿದ್ದು, ಆ ಪೈಕಿ ಡೈಲಿ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ 699 ರೂ. ಮತ್ತು 599 ರೂ. ಯೋಜನೆಗಳು ಆಕರ್ಷಕವಾಗಿವೆ.
ಈ ಎರಡೂ ಯೋಜನೆಗಳು ಹೆಚ್ಚಿನ ಡೇಟಾ, ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ.
ಏರ್ಟೆಲ್ ಟೆಲಿಕಾಂನ 599 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ.
ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯವಾಗಲಿವೆ.
ಹಾಗೂ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಗ್ರಾಹಕರಿಗೆ ಮನರಂಜನೆಯನ್ನು ನೀಡುವುದರಲ್ಲಿ ಸಂಶಯವಿಲ್ಲ.
ಏರ್ಟೆಲ್ ಜನಪ್ರಿಯ ಪ್ರಿಪೇಡ್ ಪ್ಲಾನ್‌ಗಳಲ್ಲಿ ಒಂದಾಗಿರುವ 699 ರೂ. ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ.
ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಪಡೆಯಬಹುದು. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯವಾಗುತ್ತವೆ.
479 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ.
ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ.
ಹೆಚ್ಚುವರಿಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳನ್ನು ನೀಡಲಾಗಿದೆ.
ಇನ್ನು 666 ರೂ. ಪ್ಲಾನ್ ಕೂಡ ಆಕರ್ಷಕ ಎನಿಸಿದೆ. ಇದು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ.
ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯವಾಗಲಿವೆ.
ಜಿಯೋದೊಂದಿಗೆ ಜಿದ್ದಿಗೆ ಬಿದ್ದಂತೆ ಏರ್ಟೆಲ್ ತನ್ನ ಗ್ರಾಹಕರಿಗೆ ವಿಶೇಷ ಆಫರ್ ನೀಡಲು ಮುಂದಾಗಿದೆ. ಈ ಮೂಲಕ ಗ್ರಾಹಕರನ್ನು ಸೆಳೆಯಲು ಡೇಟಾ ಪ್ಯಾಕ್ ಜೊತೆಗೆ ಅನಿಯಮಿತ ಕರೆ ಸೌಲಭ್ಯ ಕಲ್ಪಿಸಲಿದೆ.