2nd PUC ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!
ರಾಜ್ಯ ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ದ್ವಿತೀಯ ಪಿಯುಸಿ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಟ್ (NEET) ಹಾಗೂ ಸಿಇಟಿ (CET) ಪರೀಕ್ಷೆಗಳಿಗೆ ಆನ್ ಲೈನ್ ತರಬೇತಿ ನೀಡಲು ಮುಂದಾಗಿದೆ.
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಡೆಸುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಹಾಗೂ ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳು ತಯಾರಿ ನಡೆಸಲು ನೆರವಾಗುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ತರಬೇತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ.
ಹಾಗಾಗಿ, ರಾಜ್ಯದ ಸರಕಾರಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಟ್ ಹಾಗೂ ಸಿಇಟಿ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ತರಬೇತಿ ನೀಡಲು ಪೂರಕ ಸಿದ್ದತೆ ಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿದೆ.