ಸ್ಥಳ ಮಹಜರು ವೇಳೆ ಕೊಲೆ ಆರೋಪಿಯಿಂದ ಪೊಲೀಸರಿಗೆ ಹಲ್ಲೆ : ಆರೋಪಿ ಕಾಲಿಗೆ ಗುಂಡು

Share the Article

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರಿಗೆ ಕೆರೆದುಕೊಂಡು ಹೋಗುವ ವೇಳೆ ಪೊಲೀಸ್‌ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಶಿವಮೊಗ್ಗದ ವೆಂಕಟೇಶನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಯೋಗಿಯಾಗಿದ್ದ ವಿಜಯ್ ಕೊಲೆ ಪ್ರಕರಣದಲ್ಲಿ ಪೊಲೀಸರು ಜಬೀ, ದರ್ಶನ್, ಕಾರ್ತಿಕ್ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಎ1 ಆರೋಪಿ ಆಗಿರುವ ಜಬೀಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವ ವೇಳೆ ಆರೋಪಿ ಜಬೀ ಪೊಲೀಸ್‌ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ.

ಈ ವೇಳೆ ಕುಂಸಿ ಠಾಣೆಯ ಪೊಲೀಸ್‌ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಆತ್ಮ ರಕ್ಷಣೆಗೆ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಘಟನೆಯಲ್ಲಿ ಪೊಲೀಸ್ ಪೇದೆ ರೋಷನ್ ಅವರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave A Reply