5000 ರೂ.ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಕ್ಯಾಬ್, ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ಸೂಚನೆ
ಬೆಂಗಳೂರು: ಕ್ಯಾಬ್, ಟ್ಯಾಕ್ಸಿ ಹಾಗೂ ಆಟೊ ಚಾಲಕರು ಸುಮಾರು 45 ದಿನಗಳ ಕೊರೊನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕಾಗಿ ಅವರಿಗೆ 5 ಸಾವಿರ ಸಹಾಯಧನ ಮಾಡಲಾಗುತ್ತದೆ. ಇದರ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ ಸೇವಾಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಲು ಕ್ಯಾಬ್, ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ಸೂಚಿಸಿದೆ.
ಸಾರಿಗೆ ಇಲಾಖೆ ಆಯುಕ್ತರು ಸುತ್ತೋಲೆ ಪ್ರಕಟಿಸಿದ್ದು, ಆನ್‌ಲೈನ್‌ನಲ್ಲಿ ಸೇವಾ ಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಚಾಲಕರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಆನ್ ಲೈನ್ ಮಾರ್ಗವನ್ನೇ ಬಳಸಬೇಕು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿದಲ್ಲಿ ಅದನ್ನು ಪರಿಗಣಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟವಾಗಿ ತಿಳಿಸಲಾಗಿದೆ.
https://sevasindhu.karnataka.gov.in/Sevasindhu/Kannada?ReturnUrl=%2F