ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಹತ್ತನೇ ತರಗತಿ ತೇರ್ಗಡೆಯಾದ ಭಾರತೀಯ ಸೈನ್ಯದಲ್ಲಿ 15 ವರ್ಷಗಳ ಸೇವಾನುಭವ ಹೊಂದಿರುವ 50 ವರ್ಷದೊಳಗಿನ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಸೂಕ್ತ ದಾಖಲಾತಿಗಳೊಂದಿಗೆ ಅಧ್ಯಕ್ಷರು ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, #58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ, ಬೆಂಗಳೂರು -560025 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0824-2450933ಗೆ ಕರೆ ಮಾಡಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿ ವೇತನ 2022-23ನೇ ಸಾಲಿಗೆ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ನ.15ರೊಳಗೆ ಹಾಗೂ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ನ.30ರ ವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ, ಅದರ ಹಾರ್ಡ್ಕಾಪಿ ಮತ್ತು ಅಗತ್ಯ ದಾಖಲೆಗಳ ಜೆರಾಕ್ಸ್ಗಳನ್ನು ಆಯಾಯ ಶಾಲೆ, ಕಾಲೇಜುಗಳಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಚೇರಿ ವೆಬ್ಸೈಟ್ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8277799990 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಮಂಗಳೂರು : ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ 2022-23ನೇ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ವೆಬ್ಸೈಟ್ ವಿಳಾಸ ಮೂಲಕ ಇದೇ ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0824-2450114 ಸಂಪರ್ಕಿಸುವಂತೆ ಸಮಗ್ರ ಹಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ