Home Karnataka State Politics Updates ದಿ. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಗುದ್ದಲಿ ಪೂಜೆ | ಕನಸು ನನಸಾಗಿಸುವಲ್ಲಿ ಬಿಜೆಪಿ...

ದಿ. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಗುದ್ದಲಿ ಪೂಜೆ | ಕನಸು ನನಸಾಗಿಸುವಲ್ಲಿ ಬಿಜೆಪಿ ಸಾಥ್!!!

Hindu neighbor gifts plot of land

Hindu neighbour gifts land to Muslim journalist

ಕಳೆದ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ವಿಚಾರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರಿಗೆ 60 ಲಕ್ಷ ವೆಚ್ಚದ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ್ದು, ಪ್ರವೀಣ್ ಕನಸು ನನಸಾಗಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮತ್ತು ನಳಿನ್ ಕುಮಾರ್ ಕಟೀಲ್ ಹೆಜ್ಜೆ ಇಟ್ಟಿದ್ದಾರೆ.

ಪ್ರವೀಣ್ ‌ನೆಟ್ಟಾರು ಕನಸಿನ ಮನೆ ನಿರ್ಮಾಣಕ್ಕೆ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದು, ಪ್ರವೀಣ್ ಅವರ ಕನಸಿನಂತೆ ಮನೆ ಕಟ್ಟುವ ಕನಸನ್ನು ಈಡೇರಿಸಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಮುಂದಾಗಿದ್ದಾರೆ.

ದ‌.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುವಿನಲ್ಲಿರುವ ಪ್ರವೀಣ್ ನೆಟ್ಟಾರು ರವರ ಕನಸಿನ ಮನೆಗೆ ನಳಿನ್ ಕುಮಾರ್ ಕಟೀಲ್ ಶಂಕು ಸ್ಥಾಪನೆಯನ್ನು ಮಾಡಿದ್ದಾರೆ. ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲೇ ಹೊಸ ಮನೆಗೆ ಶಂಕುಸ್ಥಾಪನೆ ಮಾಡಲಾಗಿದ್ದು, ಪೂಜೆ ನೆರವೇರಿಸಿ ಕುಟುಂಬಸ್ಥರ ಸಮ್ಮುಖದಲ್ಲಿ ಮನೆಗೆ ಗುದ್ದಲಿ ಪೂಜೆ ಮಾಡಲಾಗಿದೆ.

ಹಳೆಯ ಮನೆಯನ್ನು ಕೆಡವಿ ಹೊಸ ಮನೆಗೆ ಗುದ್ದಲಿ ಪೂಜೆ ನೆರವೇರಿಸಿದ್ದು, ಮೊಗರೋಡಿ ಕನ್ಸ್ ಸ್ಟ್ರಕ್ಷನ್ ಕಂಪನಿಗೆ ಮನೆ ನಿರ್ಮಾಣ ಕಾರ್ಯದ ಹೊರೆಯನ್ನು ವಹಿಸಲಾಗಿದೆ. 2,700 ಚ.ಅಡಿಯ ನೂತನ ಮನೆಗೆ 60 ಲಕ್ಷ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ.

ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಎಸ್.ಅಂಗಾರ, ಶಾಸಕ ಸಂಜೀವ ಮಠಂದೂರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ, ಪ್ರವೀಣ್ ಪತ್ನಿ ನೂತನ ಹಾಗೂ ಕುಟುಂಬಿಕರು ಉಪಸ್ಥಿತಿಯಿದ್ದರು. ಕೆಲ ದಿನಗಳ ಹಿಂದೆ ಪ್ರವೀಣ್ ಕುಟುಂಬಸ್ಥರಿಗೆ ಭರವಸೆ ನೀಡಿದ್ದ ‌ನಳಿನ್, ಕೊಟ್ಟ ಮಾತಿನಂತೆ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.

ಪ್ರವೀಣ್ ಪತ್ನಿಗೆ ‌ದ.ಕ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಸರ್ಕಾರಿ ಕೆಲಸ ಕೂಡ ಸಿಕ್ಕಿದೆ. ಇನ್ನು ಮನೆಯ ಗುದ್ದಲಿ ಪೂಜೆ ಬಳಿಕ ಪ್ರವೀಣ್ ಪತ್ನಿ ‌ನೂತನರವರು, ಈ ಸಂದರ್ಭ ಮನೆಯವರ ಪರವಾಗಿ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ. ‌ಸಂಸದರು, ಸಚಿವರು ಮತ್ತು ಬಿಜೆಪಿ‌ ಮುಖಂಡರು ಪ್ರವೀಣ್ ‌ಕನಸಿಗೆ ಸಾಥ್ ನೀಡಿ ಕನಸನ್ನು ಈಡೇರಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರು ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಮುಂದಾಗಿದ್ದು, ಬಿಜೆಪಿ ಪಕ್ಷದ ಒಗ್ಗಟ್ಟಿನ ಪ್ರತೀಕವಾಗಿ ಇಡೀ ತಂಡ ಕುಟುಂಬದ ‌ಜೊತೆಗೆ ನಿಲ್ಲುವ ಭರವಸೆ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ‌ಮನೆಗೆ ಶಂಕುಸ್ಥಾಪನೆ ‌ನೆರವೇರಿಸಿ ಬಿಜೆಪಿ ರಾಜ್ಯಾಧ್ಯಕ್ಷ ‌ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ಕನಸು ನನಸು ಮಾಡಲು ಪಕ್ಷ ಮೊದಲ ಹೆಜ್ಜೆ ಮುಂದಿಟ್ಟಿದೆ. ಅವರ ಹಳೆಯ ಮನೆ ಕೆಡವಿ ಇಂದು ಹೊಸ ಮನೆಗೆ ಗುದ್ದಲಿ ಪೂಜೆ ಮಾಡಿದ್ದೇವೆ.‌ 60 ಲಕ್ಷ ವೆಚ್ಚದಲ್ಲಿ 2700 ಚ.ಅಡಿಯ ಮನೆ ನಿರ್ಮಾಣ ಆಗಲಿದ್ದು, ಮುಗ್ರೋಡಿ ಕನ್ಸ್ಟ್ ಕ್ಷನ್ ಕಂಪೆನಿ ಮೇ ಅಂತ್ಯದ ಒಳಗೆ ಮನೆ ನಿರ್ಮಾಣ ಕಾರ್ಯ ಮುಗಿಸುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈಗಾಗಲೇ ಪ್ರವೀಣ್ ಪತ್ನಿಗೆ ಡಿಸಿ ‌ಕಚೇರಿಯಲ್ಲಿ ಕೆಲಸ ಸಿಕ್ಕಿದ್ದು, ಆರ್ಥಿಕ ನೆರವಿನ ಮೂಲಕ ಕುಟುಂಬಕ್ಕೆ ಬೆಂಬಲವಾಗುವ ನಿಟ್ಟಿನಲ್ಲಿ ಬಿಜೆಪಿಯಿಂದ 25 ಲಕ್ಷ, ಸರ್ಕಾರ 25 ಲಕ್ಷ ಹಾಗೂ ಯುವಮೋರ್ಛಾ 15 ಲಕ್ಷ ನೀಡಲಾಗಿದೆ. ಪ್ರವೀಣ್ ಉತ್ತಮ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಅವರ ಕುಟುಂಬದ ಜೊತೆ ಸದಾ ನಾವು ಬೆಂಬಲವಾಗಿ ನಿಲ್ಲುತ್ತೇವೆ. ಪ್ರವೀಣ್ ನೆಟ್ಟಾರ್ ಅವರ ಕೆಲಸಕ್ಕೆ ‌ಮೌಲ್ಯ ಕಟ್ಟಲು ಸಾಧ್ಯವಿಲ್ಲದಿದ್ದರೂ ಕೂಡ ಇಲ್ಲಿ ಹಣಕ್ಕಿಂತ ಮಾನವೀಯತೆ ಮುಖ್ಯವಾಗುತ್ತದೆ.

ನಾವು ಹತ್ಯೆಯಾದ ವೇಳೆಯೇ ಕುಟುಂಬದ ಜೊತೆ ನಿಲ್ಲುವ ಭರವಸೆ ಕೊಟ್ಟಿದ್ದೆವು. ಪ್ರವೀಣ್ ಅವರು ಪಕ್ಷಕ್ಕಾಗಿ ಸಾಕಷ್ಟು ಸಮಯ ಮೀಸಲಿಟ್ಟಿದ್ದರು. ಹಾಗಾಗಿ ಪಕ್ಷ ಅವರ ಕುಟುಂಬದ ಪರ ನಿಲ್ಲುವುದು ಧರ್ಮವಾಗಿದೆ. ಮನೆಯವರೇ ಕೊಟ್ಟ ನಕ್ಷೆಯ ಪ್ರಕಾರ ಈ ಮನೆ ನಿರ್ಮಾಣ ಆಗುತ್ತಿದ್ದು, ಹಲವಾರು ಮಂದಿ ‌ಮನೆ ಕಟ್ಟಿ ಕೊಡಲು ಮುಂದೆ ಬಂದರು ಕೂಡ ಅವರ ಮನೆಯವರ ಅಭಿಪ್ರಾಯದಂತೆ ಪಕ್ಷವೇ ಮನೆ ಕಟ್ಟಿ ಕೊಡಲು ಅಣಿಯಾಗುತ್ತಿದೆ. ಇಡೀ ಮನೆಯ ವೆಚ್ಚವನ್ನು ಬಿಜೆಪಿ ಪಕ್ಷ ಭರಿಸಲಿದೆ ಎಂದು ಸಚಿವರು ಹೇಳಿದ್ದಾರೆ.

ಅಪರಾಧ ಎಸಗಿದವರನ್ನು ಬಂಧಿಸಲು ಶೋಧ ಕಾರ್ಯ ನಡೆಯುತ್ತಿದ್ದು, ಇದರ ಹಿಂದೆ ಇರೋ ಎಲ್ಲಾ ಶಕ್ತಿಗಳನ್ನು ಹುಟ್ಟಡ ಗಿಸುವ ಪ್ರಯತ್ನ ನಡೆಸುತ್ತಿದೆ . ಪ್ರಮುಖ ಆರೋಪಿಗಳು ಜೈಲಿನ ಒಳಗೆ ಇದ್ದು, ಆರ್ಥಿಕ, ವಾಹನ ಕೊಟ್ಟವರು, ಮಾನಸಿಕವಾಗಿ ಆರೋಪಿಗಳ ಜೊತೆ ಬೆಂಬಲ ನೀಡುವವರನ್ನು ಕ್ಷಮಿಸುವ ಮಾತೇ ಇಲ್ಲ!!… ಇದಕ್ಕಾಗಿ ಎನ್ಐಎ ತಪ್ಪಿಸಿಕೊಂಡವರ ಪತ್ತೆಗೆ ಬಹುಮಾನ ‌ಘೋಷಿಸಿದೆ.‌ ಈಗಾಗಲೇ ಪ್ರವೀಣ್ ಹತ್ಯೆ ಬಳಿಕ ಪಿಎಫ್ಐ ನಿಷೇಧ ಆಗಿದ್ದು, ಸದ್ಯ ‌ಹತ್ಯೆ ಕೇಸ್ ಆರೋಪಿಗಳು ಯಾವ ಕೋರ್ಟ್ ನಲ್ಲಿಯೂ ಹೊರ ಬರದ ಹಾಗೆ ಪ್ರಕರಣ ದಾಖಲಿಸಲಾಗಿದೆ.‌ ಹಾಗಾಗಿ, ಅಪರಾಧಿಗಳಿಗೆ ಶಿಕ್ಷೆ ಖಚಿತ ಈ ಸಂದರ್ಭದಲ್ಲಿ ಸಚಿವರಾದ ನಳಿನ್ ಕುಮಾರ್ ಕಟೀಲ್ ಎಂಬ ಮಾಹಿತಿಯನ್ನು ನೀಡಿದ್ದಾರೆ.