ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಂಬೆಳಗ್ಗೆ ರಾಜ್ಯದ ಹಲವಡೆ ಮತ್ತೆ `NIA ಅಧಿಕಾರಿಗಳು ದಾಳಿ : ಮೂವರು ವಶಕ್ಕೆ

Share the Article

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ.

ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ರಾಜ್ಯ ಕಾರ್ಯದರ್ಶಿ ಶೆಫಿ ಬೆಳ್ಳಾರೆಯನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.

Leave A Reply