Home Breaking Entertainment News Kannada ರಾಷ್ಟ್ರಪ್ರಶಸ್ತಿ ವಿಜೇತೆ ಜೊತೆ ರಾಜ್ ಬಿ ಶೆಟ್ಟಿ ಸಿನಿಮಾ | ಯಾವ ಸಿನಿಮಾ? ಏನ್ ಸ್ಟೋರಿ?

ರಾಷ್ಟ್ರಪ್ರಶಸ್ತಿ ವಿಜೇತೆ ಜೊತೆ ರಾಜ್ ಬಿ ಶೆಟ್ಟಿ ಸಿನಿಮಾ | ಯಾವ ಸಿನಿಮಾ? ಏನ್ ಸ್ಟೋರಿ?

Hindu neighbor gifts plot of land

Hindu neighbour gifts land to Muslim journalist

ಒಂದು ಮೊಟ್ಟೆಯ ಕಥೆ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ ಖ್ಯಾತ ನಟ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿಯವರು ವಿಭಿನ್ನ ಕಾನ್ಸೆಪ್ಟ್ ಮೂಲಕ ಕನ್ನಡ ಸಿನಿರಸಿಕರ ಹೃದಯ ಗೆದ್ದಿದ್ದಾರೆ. ಇದೀಗ ರಾಜ್ ಶೆಟ್ಟಿ ಮಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಮಲಯಾಳಂ ಸಿನಿಮಾ ‘ರುಧಿರಂ’ ನಲ್ಲಿ ಇವರಿಗೆ ಜೋಡಿಯಾಗಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಟಿಸುತ್ತಿದ್ದಾರೆ ಎಂದು ಬಹಿರಂಗ ಪಡಿಸಿದ್ದಾರೆ.

2015ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಅಪರ್ಣಾ ಮಲಯಾಳಂನ ‘ಒರು ಸೆಕೆಂಡ್ ಕ್ಲಾಸ್ ಯಾತ್ರ’ ಸಿನಿಮಾ ಮೂಲಕ ಮೊದಲ ಬಾರಿಗೆ ತೆರೆಮೇಲೆ ಮಿಂಚಿದರು. ಮಲಯಾಳಂನ ಕೆಲವು ಸಿನಿಮಾಗಳ ಜೊತೆಗೆ ತಮಿಳಿನಲ್ಲೂ ಬ್ಯುಸಿಯಾದರು. ನಟ ಸೂರ್ಯಗೆ ಜೋಡಿಯಾಗಿ ನಟಿಸಿದ್ದ ಸಿನಿಮಾ ‘ಸೂರರೈ ಪೊಟ್ರು’ ವಿನಿಂದ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದಾರೆ. ಅಲ್ಲದೆ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿಯನ್ನು ಗೆದ್ದಿದ್ದಾರೆ.

ಜಿಶೋ ಲೋನ್ ಆಂಟೋನಿ ನಿರ್ದೇಶನದ ‘ರುಧಿರಂ’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ರಾಜ್ ಬಿ ಶೆಟ್ಟಿ ಮತ್ತು ಅಪರ್ಣಾ ಇಬ್ಬರೂ ಪೋಸ್ಟರ್ ಶೇರ್ ಮಾಡಿದ್ದಾರೆ. ಈ ಸಿನಿಮಾಗೆ ಕನ್ನಡದ ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್ ಸಂಗೀತ ನೀಡುತ್ತಿದ್ದಾರೆ. ಸದ್ಯ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡುತ್ತಿದೆ. ಈ ಸಿನಿಮಾ ಮಲಯಾಳಂ ಜೊತೆಗೆ ಕನ್ನಡ, ತೆಲುಗು ಮತ್ತು ತಮಿಳಿನಲ್ಲೂ ರಿಲೀಸ್ ಆಗಲಿದೆ.

ಸದ್ಯ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಾಜ್ ಬಿ ಶೆಟ್ಟಿ ಮತ್ತು ಅಪರ್ಣಾ,ಜೋಡಿಯಾಗಿ ತೆರೆಮೇಲೆ ಕಾಣಿಸಿಕೊಳ್ಳುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.